ಮನೆ ಖರೀದಿ ಸಬ್ಸಿಡಿ ಪಡೆವ ಅವಧಿ ವಿಸ್ತರಣೆ
Team Udayavani, Jan 1, 2019, 12:30 AM IST
ಹೊಸದಿಲ್ಲಿ: ಹೊಸ ವರ್ಷ ಪ್ರವೇಶದ ಸಂದರ್ಭದಲ್ಲಿ ಸ್ವಂತ ಮನೆ ಹೊಂದಬೇಕು ಕನಸನ್ನು ಹೊತ್ತ ಮಧ್ಯಮ ವರ್ಗದವರಿಗೆ ಕೇಂದ್ರ ಸರಕಾರವು ಶುಭ ಸುದ್ದಿ ನೀಡಿದೆ. 6 ಲಕ್ಷ ರೂ.ಯಿಂದ 18 ಲಕ್ಷ ರೂ. ಆದಾಯ ಹೊಂದಿರುವ ಮಧ್ಯಮ ವರ್ಗದ ಜನರು ಖರೀದಿಸುವ ಮೊದಲ ಮನೆಗೆ 2020ರ ಮಾರ್ಚ್ ವರೆಗೂ ಸಬ್ಸಿಡಿ ಪಡೆಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಸಹಾಯಕ ಸಚಿವ ಖಾತೆ ಸಚಿವ ಹರದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ಈ ಯೋಜನೆಯ ಪ್ರಗತಿ ಅತ್ಯಂತ ಉತ್ತಮವಾಗಿದೆ. ಈ ವರ್ಷದ ಅಂತ್ಯದಲ್ಲಿ ಒಂದು ಲಕ್ಷ ಜನರು ಈ ಸೌಲಭ್ಯವನ್ನು ಪಡೆದಿದ್ದಾರೆ. ಹೀಗಾಗಿ ಬಡ್ಡಿ ಮೇಲಿನ ಸಬ್ಸಿಡಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಯೋಜನೆಯನ್ನು 2016 ಡಿಸೆಂಬರ್ನಲ್ಲಿ ಮಧ್ಯಮ ವರ್ಗದವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದರು. ಆರಂಭದಲ್ಲಿ ಇದನ್ನು ಒಂದು ವರ್ಷದ ಅವಧಿಗೆ ಜಾರಿಗೆ ತರಲಾಗಿತ್ತು. ಅಂದಿನಿಂದಲೂ ಪ್ರತಿ ವರ್ಷ ಯೋಜ ನೆಯ ಅವಧಿಯನ್ನು ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು