ಮಹಾತ್ಮ, ವಾಜಪೇಯಿಗೆ ಗೌರವ ನಮನ
Team Udayavani, May 31, 2019, 6:03 AM IST
ನವದೆಹಲಿ: ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮೊದಲು ಗುರುವಾರ ಬೆಳಗ್ಗೆ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಮಾಧಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅಲ್ಲದೆ, ಇಂಡಿಯಾ ಗೇಟ್ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ. ಬೆಳಗ್ಗೆ ಏಳು ಗಂಟೆಗೇ ರಾಜ್ಘಾಟ್ಗೆ ಅವರು ತೆರಳಿದ್ದರು. ನಂತರ ಅಲ್ಲಿಂದ ವಾಜಪೇಯಿಯವರ ಸದೈವ ಅಟಲ್ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವರ್ಷ ಮಹಾತ್ಮ ಗಾಂಧಿ 150ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ. ಬಾಪುರವರ ಚಿಂತನೆಗಳು ನಮ್ಮನ್ನು ಇನ್ನಷ್ಟು ಸ್ಫೂರ್ತಿಗೊಳಿಸಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ವಾಜಪೇಯಿಯವರನ್ನೂ ನೆನಪಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು