ಮಹಿಳೆಯ ಮೇಲೆ ಅತ್ಯಾಚಾರ: ಹೊಟೇಲ್ ಮ್ಯಾನೇಜರ್ ಅರೆಸ್ಟ್
Team Udayavani, May 3, 2018, 12:12 PM IST
ಗುರುಗ್ರಾಮ : ಇಲ್ಲಿನ ಸೆಕ್ಟರ್ 45ರಲ್ಲಿರುವ ಹೊಟೇಲ್ ಒಂದರಲ್ಲಿ ಅತಿಥಿಯಾಗಿದ್ದ ಮಹಿಳೆಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಪೊಲೀಸರು ಹೊಟೇಲ್ ಮ್ಯಾನೇಜರ್ನನ್ನು ಬಂಧಿಸಿದ್ದಾರೆ.
ಇಲ್ಲಿನ ಎಮಾರ್ ರೆಸಿಡೆನ್ಸಿಯಲ್ಲಿ ಈ ಘಟನೆ ನಡೆದಿದೆ. 22ರ ಹರೆಯದ ಮಹಿಳೆ ತನ್ನ ಪತಿಯೊಂದಿಗೆ ಕಳೆದ ಒಂದು ತಿಂಗಳಿಂದ ಇಲ್ಲಿ ನೆಲೆಸಿದ್ದಾಳೆ. ಆರೋಪಿ ರಾಘವ ಎಂಬಾತನು ಹೊಟೇಲಿನಲ್ಲಿ ಡಿಮ್ಯಾಂಡ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
ರಾತ್ರಿ 11.45ರ ಹೊತ್ತಿಗೆ ನನ್ನ ಕೋಣೆಗೆ ಆರೋಪಿ ರಾಘವನು ಬಂದಿದ್ದಾಗ ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಪತಿ ಬೇರೆ ಊರಿಗೆ ಹೋಗಿದ್ದರು. ನಾನು ಪ್ರಜ್ಞೆಗೆ ಮರಳಿದಾಗ ರಾಘವನು ನನ್ನ ಮೇಲೆ ಅತ್ಯಾಚಾರ ನಡೆಸಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆಯು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾಳೆ.
ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಅತ್ಯಾಚಾರದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್