ರಿಯಾಧ್‌ನ ಅರಬ್‌-ಇಸ್ಲಾಮಿಕ್‌ ಶೃಂಗದಲ್ಲಿ ಪಾಕ್‌ ಪ್ರಧಾನಿಗೆ ಮುಖಭಂಗ

Team Udayavani, May 23, 2017, 3:38 PM IST

Nawaz Sharif tension-700.jpg

ಹೊಸದಿಲ್ಲಿ : ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರಿಗೆ ಈಗ ದೇಶದ ಒಳಗೆ ಮತ್ತು ಹೊರಗೆ ಒಂದರ ಬಳಿಕ ಒಂದರಂತೆ ಮುಖಭಂಗ ಅನುಭವಿಸುವ ದುರ್ದೆಶೆ ಎದುರಾಗುತ್ತಿರುವುದು ವಿಧಿಯ ವಿಪರ್ಯಾಸವಾಗಿದೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಸೌದಿ ದೊರೆ ಸಲ್ಮಾನ್‌ ಬಿನ್‌ ಅಬ್ದುಲಜೀಜ್‌ ಅವರು ಭಾಗವಹಿಸಿದ್ದ  ಸೌದಿ ಅರೇಬಿಯದ ರಿಯಾಧ್‌ನಲ್ಲಿನ ಪ್ರಪ್ರಥಮ ಅರಬ್‌ – ಇಸ್ಲಾಮಿಕ್‌ – ಅಮೆರಿಕನ್‌ ಶೃಂಗದಲ್ಲಿ ಭಯೋತ್ಪಾದನೆ ವಿರುದ್ಧದ ಸಮರದ ಕುರಿತಾಗಿ ಮಾತನಾಡುವ ಅವಕಾಶವೇ ನವಾಜ್‌ ಷರೀಫ್ ಗೆ ಸಿಗದೇ ಹೋದದ್ದು ಅವರಿಗಾಗಿರುವ ಭಾರೀ ಮುಖಭಂಗವೆಂದು ತಿಳಿಯಲಾಗಿದೆ. 

ಉಗ್ರ ನಿಗ್ರಹದ ಈ ಶೃಂಗದಲ್ಲಿ ಸಣ್ಣ ಪುಟ್ಟ ರಾಷ್ಟ್ರಗಳ ನಾಯಕರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವಕಾಶ ಸಿಕ್ಕಿತ್ತು. ಆದರೆ ಪಾಕ್‌ ಪ್ರಧಾನಿ ಷರೀಫ್ ಗೆ ಅಂತಹ ಅವಕಾಶವನ್ನೇ ನಿರಾಕರಿಸಲಾಯಿತು ಎಂದು ಪಾಕಿಸ್ಥಾನದ ದೈನಿಕ “ದ ನೇಶನ್‌’ ವರದಿ ಮಾಡಿದೆ. 

“ಅರಬ್‌ – ಇಸ್ಲಾಮಿಕ್‌ ಶೃಂಗದಲ್ಲಿ ಪಾಲ್ಗೊಂಡ ಮುಸ್ಲಿಂ ಅಣ್ವಸ್ತ್ರ ದೇಶವಾಗಿರುವ ಪಾಕಿಸ್ಥಾನ  ಭಯೋತ್ಪಾದನೆ ವಿರುದ್ಧದ ಸಮರದಲ್ಲಿ ವಹಿಸುತ್ತಿರುವ ಪಾತ್ರವನ್ನು ಎಲ್ಲಿಯೂ ಉಲ್ಲೇಖೀಸಲಾಗಿಲ್ಲ; ಮಾತ್ರವಲ್ಲದೆ ಈ ಬಗೆಗಿನ ತನ್ನ ಅಭಿಪ್ರಾಯವನ್ನು ಮಂಡಿಸುವ ಅವಕಾಶವನ್ನೂ ದೇಶದ ಪ್ರಧಾನಿಗೆ (ನವಾಜ್‌ ಷರೀಫ್) ನೀಡಲಾಗಿಲ್ಲ; ಆ ಮೂಲಕ ಈ ಶೃಂಗದಲ್ಲಿ ಪಾಕಿಸ್ಥಾನವನ್ನು ಸಂಪೂರ್ಣವಾಗಿ ಅವಮಾನಿಸಲಾಗಿದೆ ಎಂಬ ಅಭಿಪ್ರಾಯ ಪಾಕ್‌ ಮಾಧ್ಯಮ ನಿಯೋಗದಲ್ಲಿ ನೆಲೆಗೊಳ್ಳುವಂತಾಯತು’ ಎಂದು ವರದಿಯು ಹೇಳಿದೆ. 

ಭಯೋತ್ಪಾದನೆ ವಿರುದ್ಧದ ಸಮರದಲ್ಲಿ ತಾನು ಸಾಕಷ್ಟು ಕೆಲಸ ಮಾಡುತ್ತಿದ್ದೇನೆ ಎಂಬ ಪಾಕಿಸ್ಥಾನದ ಬೊಗಳೆಗೆ ಈ ಶೃಂಗದಲ್ಲಿ ಪರೋಕ್ಷವಾಗಿ ಉತ್ತರ ನೀಡಲಾಯಿತು ಎಂದು ವಿದೇಶೀ ಮಾಧ್ಯಮಗಳು ಹೇಳಿವೆ. 

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.