ಜೆಎನ್ ಯು ಬಿಕ್ಕಟ್ಟು ಶಮನದ ಪರಿಹಾರಕ್ಕೆ ಸಮಿತಿ ರಚಿಸಿದ ಮಾನವ ಸಂಪನ್ಮೂಲ ಸಚಿವಾಲಯ

Team Udayavani, Nov 18, 2019, 7:21 PM IST

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿನ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಶಿಫಾರಸು ಮಾಡಿದೆ ಎಂದು ವರದಿ ತಿಳಿಸಿದೆ.

ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ವಿಎಸ್ ಚೌಹಾಣ್, ಎಐಸಿಟಿಯುನ ಅಧ್ಯಕ್ಷ ಪ್ರೊ.ಅನಿಲ್ ಸಹಸ್ರಾಬುಧೆ ಹಾಗೂ ಯುಜಿಸಿ ಕಾರ್ಯದರ್ಶಿ ಪ್ರೊ.ರಜನೀಶ್ ಜೈನ್ ಸೇರಿದಂತೆ ಸಮಿತಿಯನ್ನು ರಚಿಸಲಾಗಿದೆ.

ಆದೇಶದ ಪ್ರಕಾರ, ಪ್ರಸಕ್ತ ನಡೆಯುತ್ತಿರುವ ಬೇಡಿಕೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಆಡಳಿತ ವರ್ಗ ಮತ್ತು ಜೆಎನ್ ಯು ವಿದ್ಯಾರ್ಥಿಗಳ ಜತೆ ಸಮಿತಿ ಮಾತುಕತೆ ನಡೆಸಲಿದೆ ಎಂದು ತಿಳಿಸಿದೆ.

ಸಮಿತಿಯು ವಿದ್ಯಾರ್ಥಿಗಳು ಮತ್ತು ಯೂನಿರ್ವಸಿಟಿ ಆಡಳಿತ ವರ್ಗದ ಜತೆ ಶೀಘ್ರವೇ ಮಾತುಕತೆ ನಡೆಸಿ, ಮುಂದೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಶಿಫಾರಸ್ಸು ವರದಿಯನ್ನು ಸಲ್ಲಿಸಬೇಕೆಂದು ಸಚಿವಾಲಯದ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ