ಪತಿ, ಸ್ನೇಹಿತರಿಂದ ಗ್ಯಾಂಗ್ ರೇಪ್.: ಮಹಿಳೆಯ ಗುಪ್ತಾಂಗವನ್ನು ಸಿಗರೇಟ್ ನಿಂದ ಸುಟ್ಟು ವಿಕೃತಿ
Team Udayavani, Jan 17, 2022, 11:40 AM IST
ಇಂದೋರ್: ಮಹಿಳೆಯೊಬ್ಬಳ ಮೇಲೆ ಆಕೆಯ ಪತಿ ಮತ್ತು ಆತನ ನಾಲ್ವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
32 ವರ್ಷದ ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಆತನ ಸ್ನೇಹಿತರು ಅತ್ಯಾಚಾರಗೈದು, ಆಕೆಯ ಗುಪ್ತಾಂಗಗಳಿಗೆ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿಲಾಗಿದೆ. ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದಾಗ ಅವರು ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಎಫ್ ಐಆರ್ ಅನ್ನು ಉಲ್ಲೇಖಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಚತ್ತೀಸ್ ಗಢ್ ಮೂಲದ ಮಹಿಳೆಯು ಮ್ಯಾಟ್ರಿಮೊನಿಯಲ್ ಸೈಟ್ ಮೂಲಕ ಇಂದೋರ್ ಮೂಲದ ವ್ಯಕ್ತಿಯ ಪರಿಚಯವಾಗಿ ವಿವಾಹವಾಗಿದ್ದರು. ಆದರೆ ಆ ವ್ಯಕ್ತಿಗೆ ಅದಾಗಲೇ ವಿವಾಹವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಜಾರ್ಖಂಡ್: 14 ವರ್ಷದ ಬಾಲಕ ಸೇರಿ ಮೂವರು ನಕ್ಸಲರ ಬಂಧನ
ನವೆಂಬರ್ 2019 ಮತ್ತು ಅಕ್ಟೋಬರ್ 2021 ರ ನಡುವೆ ಇಂದೋರ್ ನ ಶಿಪ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹೇಗೋ ಫಾರ್ಮ್ಹೌಸ್ನಿಂದ ತಪ್ಪಿಸಿಕೊಂಡು ಛತ್ತೀಸ್ಗಢದಲ್ಲಿರುವ ತನ್ನ ಪೋಷಕರ ಮನೆಗೆ ತೆರಳಿದ್ದಾಳೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಆರೋಪಿಗಳಲ್ಲಿ ಒಬ್ಬರು ಆಕೆಗೆ ಹಾನಿ ಮಾಡುವ ಉದ್ದೇಶದಿಂದ ಅಲ್ಲಿಗೆ ಅವಳನ್ನು ಹಿಂಬಾಲಿಸಿ ಕೊಂಡು ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ಪತಿ ಸೇರಿದಂತೆ ಐವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ವಿವಿಧ ಪ್ರದೇಶಗಳಿಂದ ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!