ಒಕ್ಕೊರಲ ಆಕ್ರೋಶ : ಅತ್ಯಾಚಾರಿಗಳ ವಿರುದ್ಧ ಸಂಸದರ ಕಿಡಿ ; ಸಂಸತ್‌ನಲ್ಲಿ ಗಂಭೀರ ಚರ್ಚೆ

Team Udayavani, Dec 3, 2019, 6:37 AM IST

Rape-Protest-730

ಹೊಸದಿಲ್ಲಿ: ಹೈದರಾಬಾದ್‌ನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಸೇರಿದಂತೆ ದೇಶದ ಮೂಲೆ ಮೂಲೆ ಗಳಿಂದ ಕೇಳಿಬರುತ್ತಿರುವ ಮಹಿಳಾ ದೌರ್ಜನ್ಯ ವಿರುದ್ಧದ ಕೂಗು ಸಂಸತ್‌ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿದೆ.

ದೇಶದ ಸ್ತ್ರೀಕುಲಕ್ಕೆ ಭೀತಿ ಮೂಡಿಸಿರುವ ಈ ವಿಚಾರದ ಕುರಿತು ಸೋಮವಾರ ಲೋಕ ಸಭೆ ಹಾಗೂ ರಾಜ್ಯಸಭೆಗಳಲ್ಲಿ ಗಂಭೀರ ಚರ್ಚೆ ನಡೆದಿದೆ. ಪಕ್ಷಭೇದ ಮರೆತು ಎಲ್ಲ ಸದಸ್ಯರೂ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದ್ದಾರೆ. ಕೇಂದ್ರ ಸರಕಾರವೂ ಇದಕ್ಕೆ ಸ್ಪಂದಿಸಿದ್ದು, ಅತ್ಯಾಚಾರದಂಥ ಘಟನೆಗಳಿಗೆ ಕಡಿವಾಣ ಹಾಕಲು ಕಾನೂನಿನಲ್ಲಿ ಕಠಿನ ನಿಬಂಧನೆಗಳನ್ನು ತರಲು ಸಿದ್ಧ ಎಂದು ಘೋಷಿಸಿದೆ.

ಎಲ್ಲರ ಮನಸ್ಸಿಗೂ ಘಾಸಿ ಉಂಟುಮಾಡುವಂಥ ಘಟನೆಗಳಿವು. ಇವುಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ. ಆಗ ಘೋರ ಕೃತ್ಯ ಎಸಗುವಂಥವರಿಗೆ ಕಠಿನ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಬಹುದು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಆಗ್ರಹಗಳ ಸುರಿಮಳೆ:
ಎರಡೂ ಸದನಗಳಲ್ಲಿ ಬಹುತೇಕ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದು, ಅತ್ಯಾಚಾರದಂಥ ಮಹಿಳಾ ದೌರ್ಜನ್ಯಗಳನ್ನು ನಿಯಂತ್ರಿಸಲು ಅನೇಕ ಸಲಹೆಗಳು ಹಾಗೂ ಆಕ್ರೋಶಭರಿತ ಆಗ್ರಹಗಳನ್ನೂ ಮುಂದಿಟ್ಟಿದ್ದಾರೆ. ಅಪರಾಧಿಗಳನ್ನು ಗಲ್ಲಿಗೇರಿಸಬೇಕು, ಕಾಲಮಿತಿಯ ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಸ್ಥಳದಲ್ಲೇ ಶಿಕ್ಷೆ ನೀಡುವಂಥ ಕಾನೂನು ಜಾರಿಯಾಗಬೇಕು, ಸಾರ್ವಜನಿಕವಾಗಿ ಥಳಿಸಿ ಹತ್ಯೆಗೈಯ್ಯಬೇಕು, ತಪ್ಪಿತಸ್ಥರ ಸಂತಾನಶಕ್ತಿ ಹರಣ ಮಾಡಬೇಕು, ಅಪರಾಧಿಗಳ ಫೋಟೋಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು…. ಹೀಗೆ ನಾನಾ ಆಗ್ರಹಗಳು ಕೇಳಿಬಂದಿವೆ.

ಮುಂದುವರಿದ ಆಕ್ರೋಶ: ಹೈದರಾಬಾದ್‌ ಪಶುವೈದ್ಯೆಯ ಅತ್ಯಾಚಾರ-ಹತ್ಯೆ ವಿರುದ್ಧದ ಆಕ್ರೋಶ ಮುಂದುವರಿದಿದ್ದು, ಸೋಮವಾರವೂ ದಿಲ್ಲಿ, ತೆಲಂಗಾಣ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ಹಣೆಗೆ ಕಪ್ಪುಪಟ್ಟಿ ಧರಿಸಿದ್ದ ಯುವಜನರು ಬೀದಿ ಗಿಳಿದು, ‘ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ,’ ‘ನಮಗೆ ನ್ಯಾಯ ಬೇಕು’ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ್ದಾರೆ. ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ತೆಲಂಗಾಣದ ಹಲವು ಭಾಗಗಳಲ್ಲಿ ಪ್ರತಿಭಟನೆ, ಮೊಂಬತ್ತಿ ಮೆರವಣಿಗೆಗಳು ನಡೆದಿವೆ.

ಕ್ಷಮಾದಾನಕ್ಕೆ ಅವಕಾಶವೇ ಇರಬಾರದು: ಉಪರಾಷ್ಟ್ರಪತಿ
ಸಂಸದರೆಲ್ಲರೂ ಅತ್ಯಾಚಾರದ ವಿರುದ್ಧ ಧ್ವನಿಯೆತ್ತಿದ ಬೆನ್ನಲ್ಲೇ ಉಪರಾಷ್ಟ್ರಪತಿಯೂ ಆಗಿರುವ ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು, ಇಂಥ ಘೋರ ಪ್ರಕರಣಗಳಲ್ಲಿ ಕ್ಷಮಾದಾನ ಅರ್ಜಿ ಸಲ್ಲಿಸಲು ಅಪರಾಧಿಗಳಿಗೆ ಇರುವ ಅವಕಾಶದ ಕುರಿತು ಮರುಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಸಭೆಯಲ್ಲಿ ತಮ್ಮ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ ಅವರು, ‘ಅಪರಾಧಿಗಳಿಗೆ ಶಿಕ್ಷೆ ಕೊಟ್ಟ ಬಳಿಕವೂ ಆಗುವುದೇನು? ಮೇಲ್ಮನವಿ, ಕ್ಷಮಾದಾನ ಅರ್ಜಿ… ಇಂಥ ಘೋರ ಅಪರಾಧ ಮಾಡುವವರನ್ನು ಕ್ಷಮಿಸಬೇಕು ಎಂದು ಯಾರಿಗಾದರೂ ಅನಿಸುತ್ತದೆಯೇ? ಬಹಳ ವರ್ಷಗಳಿಂದಲೂ ಈ ಪ್ರಕ್ರಿಯೆ ಮುಂದುವರಿಯುತ್ತಾ ಬಂದಿದೆ.

ನಾವು ನಿಜಕ್ಕೂ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಬಗ್ಗೆ ಪರಿಶೀಲಿಸಬೇಕಾಗಿದೆ’ ಎಂದಿದ್ದಾರೆ. ‘ಮಹಿಳೆಯರ ವಿರುದ್ಧದ ಅಪರಾಧ ಎನ್ನುವುದು ಸಾಮಾಜಿಕ ಕಾಯಿಲೆ. ಇದನ್ನು ಚಿಗುರಿನಲ್ಲೇ ಚಿವುಟಿಹಾಕಬೇಕು. ನಮಗೆ ಬೇಕಾಗಿರುವುದು ಹೊಸ ವಿಧೇಯಕವಲ್ಲ, ರಾಜಕೀಯ ಇಚ್ಛಾಶಕ್ತಿ’ ಎಂದೂ ಅವರು ಹೇಳಿದ್ದಾರೆ.

ಥಳಿಸಿ ಹತ್ಯೆಗೆ ಜಯಾ ಬಚ್ಚನ್‌ ಕರೆ
ಅತ್ಯಾಚಾರದ ವಿರುದ್ಧ ಆಕ್ರೋಶ ಹೊರ ಹಾಕುವ ಭರದಲ್ಲಿ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ‘ಥಳಿಸಿ ಹತ್ಯೆಗೈಯ್ಯಲು’ ಕರೆ ನೀಡಿದ್ದಾರೆ. ರಾಜ್ಯಸಭೆಯ ಚರ್ಚೆಯ ವೇಳೆ, ‘ನನ್ನ ಪ್ರಕಾರ, ಇಂಥ ಪ್ರಕರಣಗಳಲ್ಲಿ ಭಾಗಿಯಾಗುವ ಅತ್ಯಾಚಾರಿಗಳನ್ನು ಬೀದಿಗೆ ತಂದು, ಅವರನ್ನು ಥಳಿಸಿ ಹತ್ಯೆಗೈಯ್ಯಲು ಬಿಡಬೇಕು’ ಎಂದಿದ್ದಾರೆ.

ಆರೋಪಿಗಳಿಗೆ ಮಟನ್‌ ಕರಿ!
ಪಶುವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ತೆಲಂಗಾಣದ ಚೆರ್ಲಪಳ್ಳಿ ಜೈಲಿನಲ್ಲಿದ್ದು, ಮೊದಲ ದಿನ ಅವರಿಗೆ ಅನ್ನ ಮತ್ತು ಮಟನ್‌ ಕರಿ ನೀಡಲಾಗಿದೆ. ಜತೆಗೆ, ಅವರು ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶುವೈದ್ಯೆ ವೀಡಿಯೋ ಹುಡುಕಿದ ‘ಅಶ್ಲೀಲ’ರು!
ಹೈದರಾಬಾದ್‌ನಲ್ಲಿ ಇತ್ತೀಚೆಗೆ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಪಶುವೈದ್ಯೆಯ ಬಗ್ಗೆ ಇಡೀ ದೇಶವೇ ಮರುಕಪಡುತ್ತಿರುವ ಈ ಹೊತ್ತಿನಲ್ಲಿ, ಕೆಲವರು ಅಶ್ಲೀಲ ವೆಬ್‌ಸೈಟ್‌ ಒಂದರಲ್ಲಿ ಆ ವೈದ್ಯೆಯ ಅತ್ಯಾಚಾರದ ವೀಡಿಯೋಗಳ ತುಣುಕುಗಳನ್ನು ನೋಡಲು ಕಳೆದೊಂದು ವಾರದಲ್ಲಿ ಅತಿ ಹೆಚ್ಚಾಗಿ ಹುಡುಕಾಟ ನಡೆಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಆ ವೆಬ್‌ಸೈಟ್‌ನ ಭಾರತೀಯ ಆವೃತ್ತಿಯಲ್ಲಿ ಟ್ರೆಂಡ್ಸ್‌ ವಿಭಾಗದಲ್ಲಿ ಬ್ಯಾಂಗ್‌ ಎಂಬ ವಿಭಾಗದಡಿ ಪಶುವೈದ್ಯೆಯ ದುರವಸ್ಥೆಯ ವೀಡಿಯೋ ತುಣುಕುಗಳಿಗಾಗಿ ಕೆಲವರು ಹುಡುಕಾಡಿದ್ದಾರೆ ಎಂಬ ಆಘಾತಕಾರಿ ವಿಚಾರವನ್ನು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.