ನಾನು ಪಕ್ಷ ನಿಷ್ಠ,ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ:ಡಿ.ಕೆ.ಶಿವಕುಮಾರ್
Team Udayavani, Jan 19, 2019, 1:28 PM IST
ಬೆಂಗಳೂರು: ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷವೇ ನನಗೆ ಸುಪ್ರೀಂ. ಹೈಕಮಾಂಡ್ ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದು ಹೇಳಿದರೆ ಸಿದ್ದನಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಧರಂ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ನೀಡಿರಲಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ನೀಡಿರಲಿಲ್ಲ ಆಗ ನಾನು ಬಾಯಿ ಮುಚ್ಚಿಕೊಂಡು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ ಎಂದರು.
7 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಈಗಲೂ ಸಚಿವ ಸ್ಥಾನ ಬಿಟ್ಟು ಕೊಡಲು ಹೇಳಿದರೆ ಸಿದ್ದನಿದ್ದೇನೆ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಡಿಕೆಶಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನುವ ವರದಿಗಳ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರು ಈ ಹೇಳಿಕೆ ನೀಡುವ ಮೂಲಕ ಪಕ್ಷ ನಿಷ್ಠೆ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ