ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್
ಭಾರತ್ ಜೋಡೋ ಯಾತ್ರೆಯನ್ನು ಮಧ್ಯದಲ್ಲಿ ಬಿಟ್ಟು ಇಲ್ಲಿಗೆ ಬರಬೇಕಾಯಿತು
Team Udayavani, Oct 7, 2022, 4:51 PM IST
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಹೋದರ, ಸಂಸದ ಡಿ.ಕೆ.ಸುರೇಶ್ ಅವರನ್ನು ಶುಕ್ರವಾರ ಇಡಿ ವಿಚಾರಣೆ ನಡೆಸಿದೆ. ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ಇಬ್ಬರ ಹಣಕಾಸಿನ ಕೊಡುಗೆಗೆ ಸಂಬಂಧಿಸಿದ ತನಿಖೆಗೆ ಸಂಸ್ಥೆ ಕರೆಸಿತ್ತು.
ಇದನ್ನೂ ಓದಿ :BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್
ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ಹಣಕಾಸಿನ ಕೊಡುಗೆಗೆ ಸಂಬಂಧಿಸಿದ ತನಿಖೆಗೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಸಂಬಂಧಿಸಿದಂತೆ ನನ್ನಿಂದ ಕೇಳಲಾದ ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ ಎಂದು ವಿಚಾರಣೆ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿಯಿಂದ ನನಗೆ ಸಮನ್ಸ್ ಬಂದಿತ್ತು. ಅಕ್ಟೋಬರ್ 23 ರ ನಂತರ ನನ್ನನ್ನು ಮತ್ತು ನನ್ನ ಸಹೋದರ ಡಿಕೆ ಸುರೇಶ್ ಇಬ್ಬರನ್ನೂ ಕರೆಯುವಂತೆ ನಾನು ಅವರಿಗೆ ವಿನಂತಿಸಿದ್ದೆ, ಆದರೆ ಸಂಬಂಧಪಟ್ಟ ಅಧಿಕಾರಿಯು ಅವರ ಮುಂದೆ ಹಾಜರುಪಡಿಸುವಂತೆ ಸೂಚಿಸಿದರು. ಹಾಗಾಗಿ ನಾವು ರಾಹುಲ್ ಗಾಂಧಿ ಅವರ ನೇತೃತ್ವ ದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಮಧ್ಯದಲ್ಲಿ ಬಿಟ್ಟು ಇಲ್ಲಿಗೆ ಬರಬೇಕಾಯಿತು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ