ಜಯಾ ನಿವಾಸದ ಮೇಲೆ ಐಟಿ ದಾಳಿ; ಕೋಣೆಗಿಲ್ಲ ಪ್ರವೇಶ!!
Team Udayavani, Nov 18, 2017, 9:15 AM IST
ಚೆನ್ನೈ: ನಗರದ ಪೋಯಸ್ ಗಾರ್ಡನ್ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ನಿವಾಸದ ಮೇಲೆ ಶುಕ್ರವಾರ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ರಾತ್ರೋ ರಾತ್ರಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 5ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. 1 ಲ್ಯಾಪ್ಟಾಪ್, 3 ಪೆನ್ಡ್ರೈವ್ ಸಹಿತ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕೋಣೆಗಿಲ್ಲ ಪ್ರವೇಶ
ಜಯಲಲಿತಾ ಅವರ ಕೋಣೆಯನ್ನು ನಾವು ದೇವಾಲಯವೆಂದು ಭಾವಿಸಿದ್ದೇವೆ. ಹಾಗಾಗಿ ಐಟಿ ಅಧಿಕಾರಿಗಳಿಗೆ ಕೋಣೆಗೆ ಪ್ರವೇಶ ನೀಡಿಲ್ಲ ಎಂದು ಜಯಲಲಿತಾ ಅವರ ಸಂಬಂಧಿ ವಿವೇಕ್ ಜಯರಾಮ್ ಹೇಳಿಕೆ ನೀಡಿದ್ದಾರೆ.
ಪ್ರತಿಭಟನೆ
ಐಟಿ ದಾಳಿ ನಡೆದ ಬೆನ್ನಲ್ಲೇ ಜಯಲಲಿತಾ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿ ಐಟಿ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪ್ರತಿಭಟನೆಗಳು ಆರಂಭವಾಗುತ್ತಿದ್ದಂತೆ ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಭದ್ರತೆ ಕೈಗೊಳ್ಳಲಾಯಿತು.
ಪೋಯೆಸ್ ಗಾರ್ಡನ್ನಲ್ಲಿರುವ ಶಶಿಕಲಾ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆಸುಧೀರ್ಘ ದಾಳಿ ಮತ್ತು ಭಾರೀ ದಾಖಲೆಗಳ ಪರಿಶೀಲನೆಗಳ ಬಳಿಕ ಈ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ