ನಾನೇ ಖುದ್ದು ಹೋಗಬೇಕಾಗುತ್ತೆ- ಸುಪ್ರೀಂ CJI; ಕಾಶ್ಮೀರದಲ್ಲಿ ನಿಜಕ್ಕೂ ಪರಿಸ್ಥಿತಿ ಹೇಗಿದೆ?

Team Udayavani, Sep 16, 2019, 1:42 PM IST

ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಜನರಿಗೆ ಹೈಕೋರ್ಟ್ ಮೆಟ್ಟಿಲೇರಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಕ್ಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸೋಮವಾರ ಕಳವಳ ವ್ಯಕ್ತಪಡಿಸಿದ್ದು, ಇದೊಂದು ಗಂಭೀರವಾದ ವಿಚಾರವಾಗಿದ್ದು, ನಾನೇ ಖುದ್ದಾಗಿ ಜಮ್ಮು-ಕಾಶ್ಮೀರ ಹೈಕೋರ್ಟ್ ಚೀಫ್ ಜಸ್ಟೀಸ್ ಜತೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕೋರ್ಟ್ ನಲ್ಲಿ ದೂರು ಅಥವಾ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ನಿರ್ದೇಶನ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಅಪ್ರಾಪ್ತರನ್ನು ಜೈಲಿನಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಎನಾಕ್ಷಿ ಗಂಗೂಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಹೈಕೋರ್ಟ್ ನಲ್ಲಿ ಪ್ರಶ್ನಿಸುವಂತೆ ಸೂಚಿಸಿತ್ತು. ಆಗ ಹಿರಿಯ ವಕೀಲ ಹುಝೇಫಾ ಅಹ್ಮದಿ, ಸದ್ಯದ ಪರಿಸ್ಥಿತಿಯಲ್ಲಿ ಜಮ್ಮು-ಕಾಶ್ಮೀರದ ಹೈಕೋರ್ಟ್ ಗೆ ಹೋಗಲು ಅಲ್ಲಿನ ಜನರಿಗೆ ಸಾಧ್ಯವಾಗುತ್ತಿಲ್ಲ ಎಂಬುದಾಗಿ ಮಾಹಿತಿ ನೀಡಿದ್ದರು.

ಈ ಮಾಹಿತಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸಿಜೆಐ ತೀವ್ರ ಕಳವಳ ವ್ಯಕ್ತಪಡಿಸಿ, ಈ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಇದು ಸುಳ್ಳು ಎಂದಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿಜೆಐ ಎಚ್ಚರಕೆಯನ್ನೂ ನೀಡಿರುವುದಾಗಿ ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ