ಚೀನಾ-ಪಾಕ್ ತಾಂತ್ರಿಕ ವಿನಿಮಯ ಕಳವಳಕಾರಿ: ಐಎಎಫ್ ಮುಖ್ಯಸ್ಥ
Team Udayavani, Oct 5, 2021, 10:15 PM IST
ನವದೆಹಲಿ: ಲಡಾಖ್‌ನಲ್ಲಿ ಚೀನಾದಿಂದ ಎದುರಾಗುವ ಸಂಭಾವ್ಯ ದಾಳಿ ತಡೆಯುವ ನಿಟ್ಟಿನಲ್ಲಿ ಮೂರು ವಾಯು ನೆಲೆಗಳಲ್ಲಿ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಚೀನಾ ಮತ್ತು ಪಾಕಿಸ್ತಾನ ಇತ್ತೀಚೆಗೆ ತಾಂತ್ರಿಕ ಮಾಹಿತಿ ವಿನಿಮಯ ವಿಚಾರದ ಬಗ್ಗೆ ಒಪ್ಪಂದ ಮಾಡಿಕೊಂಡದ್ದು ಕಳವಳಕಾರಿ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಪೂರ್ವ ಲಡಾಖ್‌ನಲ್ಲಿ ಚೀನಾ ಹೆಚ್ಚಿನ ಪ್ರಮಾಣದಲ್ಲಿ ಸೇನೆ ಸೇರಿಸಿದ್ದರಿಂದ ಅಳುಕಬೇಕಾದ ಅಗತ್ಯವಿಲ್ಲ. ಚೀನಾ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಒಡ್ಡಬಹುದಾದ ಸವಾಲುಗಳನ್ನು ಎದುರಿಸಲು ದೇಶ ಸಮರ್ಥವಾಗಿದೆ ಎಂದರು. ಕಳವಳಕ್ಕೆ ಒಳಗಾಗ ಬೇಕಾದ ಅಂಶವೆಂದರೆ ಎರಡೂ ರಾಷ್ಟ್ರಗಳು ಪಾಶ್ಚಿಮಾತ್ಯ ಮಿಲಿಟರಿ ತಂತ್ರಜ್ಞಾನವನ್ನು ವಿನಿಮಯ ಮಾಡಿಕೊಂಡಿವೆ ಎಂದಿದ್ದಾರೆ.
ಇದನ್ನೂ ಓದಿ:ತೆರಿಗೆ ವಂಚಕರ ಸ್ವರ್ಗವಾಯಿತೆ ಲಂಡನ್ ?
ಡಬಲ್ ಫಿಂಗರ್ ಟೆಸ್ಟ್ ಮಾಡಿಲ್ಲ:
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ಕೇಂದ್ರದಲ್ಲಿ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ದೂರು ಸಲ್ಲಿಸಿರುವ ಮಹಿಳಾ ಐಎಎಫ್ ಅಧಿಕಾರಿಯವರ ವೈದ್ಯಕೀಯ ಪರೀಕ್ಷೆಯ ವೇಳೆ ಸುಪ್ರೀಂ ಕೋರ್ಟ್‌ನಿಂದ ನಿಷೇಧಕ್ಕೊಳಗಾಗಿರುವ “ಎರಡು ಬೆರಳುಗಳ ಪರೀಕ್ಷೆ’ಯನ್ನು ನಡೆಸಲಾಗಿಲ್ಲ ಎಂದೂ ಚೌಧರಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಜ್ವರ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ