ಚಂದಾ ಕೊಚ್ಚರ್,ದೀಪಕ್ ಮತ್ತು ಧೂತ್ ವಿರುದ್ಧ CBI ಚಾರ್ಜ್ ಶೀಟ್
3,250 ಕೋಟಿ ಸಾಲ ವಂಚನೆ ಪ್ರಕರಣ
Team Udayavani, Apr 8, 2023, 4:07 PM IST
ಮುಂಬಯಿ: 3,250 ಕೋಟಿ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 409 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.
ಅಧಿಕಾರಿಗಳ ಪ್ರಕಾರ ಕಂಪನಿಗಳು ಮತ್ತು ವ್ಯಕ್ತಿಗಳು ಸೇರಿದಂತೆ ಒಂಬತ್ತು ಘಟಕಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹೆಸರಿಸಿದೆ.
ಚಂದಾ ಕೊಚ್ಚರ್ ಅವರನ್ನು ವಿಚಾರಣೆಗೆ ಒಳಪಡಿಸಲು ಐಸಿಐಸಿಐ ಬ್ಯಾಂಕ್ನ ಅನುಮತಿ ಕಡ್ಡಾಯವಿಲ್ಲದೆ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಲು ಸಿಬಿಐ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಜೂರಾತಿ ಕೋರಿ ಬ್ಯಾಂಕ್ಗೆ ಪತ್ರವನ್ನು ಕಳುಹಿಸಲಾಗಿದ್ದು, ಅದರ ಪ್ರತಿಕ್ರಿಯೆಗಾಗಿ ಕಾಯಲಾಗುತ್ತಿದೆ. ಸಾಮಾನ್ಯವಾಗಿ, ವಿಶೇಷ ನ್ಯಾಯಾಲಯವು ಚಾರ್ಜ್ ಶೀಟ್ನ ಸಂಜ್ಞಾನವನ್ನು ತೆಗೆದುಕೊಳ್ಳುವ ಮೊದಲು ಮತ್ತು ನಂತರ ವಿಚಾರಣೆಯನ್ನು ಪ್ರಾರಂಭಿಸುವ ಮೊದಲು ಮಂಜೂರಾತಿಗಾಗಿ ಕಾಯುತ್ತದೆ.ವಿಶೇಷ ಸಿಬಿಐ ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಇನ್ನೂ ತೆಗೆದುಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನೂನು ಕ್ರಮ ಜರುಗಿಸಲು ಅನುಮತಿ ನಿರಾಕರಣೆ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳು ಅನ್ವಯಿಸುವುದಿಲ್ಲ ಎಂದರು.
ಕಳೆದ ವರ್ಷ ಡಿಸೆಂಬರ್ನಲ್ಲಿ ಕೊಚ್ಚರ್ ಮತ್ತು ಧೂತ್ ಅವರನ್ನು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!