ಜೈಪುರದಲ್ಲಿ ಅಕ್ರಮ ಜೂಜಾಟ: ಮಹಿಳೆಯರು ಸೇರಿ 84 ಮಂದಿ ಬಂಧನ
ಬಂಧಿತರಲ್ಲಿ ಕರ್ನಾಟಕದ ಇನ್ಸ್ಪೆಕ್ಟರ್, ತಹಶೀಲ್ದಾರ್..!
Team Udayavani, Aug 21, 2022, 7:38 PM IST
ಜೈಪುರ: ಇಲ್ಲಿನ ಜೈಸಿಂಗ್ಪುರ ಖೋರ್ ಪ್ರದೇಶದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ ಬಳಿಕ ಅಕ್ರಮ ಜೂಜಾಟದಲ್ಲಿ ತೊಡಗಿದ್ದ 13 ಮಹಿಳೆಯರು ಸೇರಿದಂತೆ 84 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಬಂಧಿತರಲ್ಲಿ ಕರ್ನಾಟಕ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಬೆಂಗಳೂರಿನಲ್ಲಿ ತಹಶೀಲ್ದಾರ್ ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದ್ದು, ಅವರ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಜೈಪುರ ಪೊಲೀಸರ ತಂಡ ಶನಿವಾರ ರಾತ್ರಿ ಆರೋಪಿಗಳು ಜೂಜಾಡುತ್ತಿದ್ದ ಸಾಯಿಪುರ ಬಾಗ್ ರೆಸಾರ್ಟ್ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. 9 ಹುಕ್ಕಾ, ಐಎಂಎಫ್ಎಲ್ನ 44 ಬಾಟಲಿಗಳು, 66 ಬಿಯರ್ ಬಾಟಲಿಗಳು, 14 ಐಷಾರಾಮಿ ಕಾರುಗಳು, ಒಂದು ಟ್ರಕ್ ಮತ್ತು 23.78 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜೈಪುರ ಪೊಲೀಸ್ ಹೆಚ್ಚುವರಿ ಆಯುಕ್ತ ಅಜಯ್ಪಾಲ್ ಲಂಬಾ ತಿಳಿಸಿದ್ದಾರೆ.
ಆರೋಪಿಗಳು ಹರಿಯಾಣ, ಪಂಜಾಬ್, ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳವರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು