ಇಮ್ರಾನ್ ಖೇಡವಾಲಾ.. ಗುಜರಾತ್ ನ 182 ಶಾಸಕರಲ್ಲಿ ಇವರೊಬ್ಬರೇ ಮುಸ್ಲಿಂ ಶಾಸಕ
Team Udayavani, Dec 10, 2022, 11:31 AM IST
ಅಹಮದಾಬಾದ್: 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಈ ನಡುವೆ ಸಂಪೂರ್ಣ ಚುನಾವಣೆಯಲ್ಲಿ ಜಯ ಗಳಿಸಿದ್ದು ಒಬ್ಬ ಮುಸ್ಲಿಂ ಅಭ್ಯರ್ಥಿ ಮಾತ್ರ. ಅವರೇ ಕಾಂಗ್ರೆಸ್ ನ ಇಮ್ರಾನ್ ಖೇಡವಾಲಾ.
ಈ ಹಿಂದಿನ ವಿಧಾನಸಭೆಯಲ್ಲಿ ಮೂವರು ಮುಸ್ಲಿಂ ಶಾಸಕರಿದ್ದರು. ಮೂವರೂ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು.
ಅಹಮದಾಬಾದ್ ನಗರದ ಜಮಾಲ್ಪುರ್-ಖಾಡಿಯಾ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರಾದ ಇಮ್ರಾನ್ ಖೇಡವಾಲಾ ಅವರು ಗುರುವಾರ ನಡೆದ ಚುನಾವಣೆಯಲ್ಲಿ 13,658 ಮತಗಳ ಅಂತರದಿಂದ ಗೆದ್ದು ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಂಡರು.
ಇದನ್ನೂ ಓದಿ:ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಭಾರತ; ತಂಡದಲ್ಲಿ ಎರಡು ಬದಲಾವಣೆ
ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಭೂಷಣ್ ಭಟ್ ಅವರನ್ನು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರದಲ್ಲಿ ಸೋಲಿಸಿದರು. ಅಲ್ಲಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಸಬೀರ್ ಕಬ್ಲಿವಾಲಾ ಕೂಡ ಕಣದಲ್ಲಿದ್ದರು.
ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ಮೂವರು ಹಾಲಿ ಶಾಸಕರು ಸೇರಿ ಒಟ್ಟು ಆರು ಮಂದಿಯನ್ನು ಕಣಕ್ಕಿಳಿಸಿತ್ತು. ಆದರೆ ಇಬ್ಬರು ಶಾಸಕರು ಸೇರಿ ಐವರು ಸೋಲನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆ
263 ಕೋಟಿ ರೂ ಅಕ್ರಮ; ಮಾಜಿ ತೆರಿಗೆ ಅಧಿಕಾರಿ, ನಟಿ ಕೃತಿ ವರ್ಮಾ ವಿಚಾರಣೆ
ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ
ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!
ಮಗುವಿನ ಜತೆಗೆ ಬಾಡಿಗೆ ತಾಯಿ ಬಾಂಧವ್ಯ ಹೊಂದಿರಬೇಕಾಗಿಲ್ಲ: ಕೇಂದ್ರ