ಹರಿಯಾಣದಲ್ಲಿ ಮತ್ತೂಬ್ಬ ನಿರ್ಭಯಾಳ ರೇಪ್, ಕೊಲೆ
Team Udayavani, May 14, 2017, 11:12 AM IST
ಸೋನಿಪತ್: ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬೀಭತ್ಸ ಗ್ಯಾಂಗ್ರೇಪ್ ಪ್ರಕರಣವೊಂದು ರಾಜಧಾನಿ ದಿಲ್ಲಿ ಸಮೀಪ ವರದಿಯಾಗಿದೆ.
ಕಳೆದ ಮಂಗಳವಾರ ಹರಿಯಾಣದ ಸೋನಿಪತ್ನ ಮನೆಯಿಂದ 23 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದ್ದು, ಬಳಿಕ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ದುಷ್ಕರ್ಮಿಗಳು ಬಳಿಕ ಆಕೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ ಕೊಲೆಗೈದಿದ್ದಾರೆ. ಘಟನೆ ಬಳಿಕ ಬೀದಿನಾಯಿಗಳು ಆಕೆ ಮುಖವನ್ನು ಮತ್ತು ದೇಹದ ಕೆಳಭಾಗವನ್ನು ಕಚ್ಚಿ ಎಳೆದೊಯ್ದಿವೆ.
ಮೃತದೇಹವನ್ನು ಕಂಡ ದಾರಿಹೋಕರು ಪೊಲೀಸರಿಗೆ ಸುದ್ದಿಮುಟ್ಟಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು ಎಂದು ಹೆತ್ತವರು ಆಗ್ರಹಿಸಿದ್ದಾರೆ.
ಈ ಭೀಭತ್ಸ ಅತ್ಯಾಚಾರ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿಕ್ರಿಯಿಸಿದ್ದು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆ ದೇಶದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ