ನಜೀಬ್: ಸಮಾಪ್ತಿ ವರದಿ
Team Udayavani, Oct 9, 2018, 8:50 AM IST
ಹೊಸದಿಲ್ಲಿ: ಜೆಎನ್ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ ಸಂಬಂಧ ಸಮಾಪ್ತಿ ವರದಿ ಸಲ್ಲಿಸಲು ಸಿಬಿಐಗೆ ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಬೇಕು ಎಂಬ ನಜೀಬ್ ತಾಯಿ ಫಾತಿಮಾ ನಫೀಸ್ ಅವರ ಮನವಿಯನ್ನೂ ಕೋರ್ಟ್ ವಜಾ ಮಾಡಿದೆ. 2 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ನಜೀಬ್ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಎಲ್ಲ ದಿಕ್ಕುಗಳಿಂದಲೂ ತನಿಖೆ ನಡೆಸಿದ್ದೇವೆ. ಆದರೆ, ಆತನ ಮೇಲೆ ಅಪರಾಧ ನಡೆದ ಬಗ್ಗೆಯೂ ಸಾಕ್ಷ್ಯಗಳು ಸಿಗುತ್ತಿಲ್ಲ ಎಂದು ಸಿಬಿಐ ಹೇಳಿತ್ತು.