ದೆಹಲಿಯಲ್ಲಿ ಐಟಿ ಭಾರೀ ದಾಳಿ; 35 ಕೋಟಿಯಷ್ಟು ಕಪ್ಪು ಹಣ ಜಪ್ತಿ 

Team Udayavani, Dec 7, 2018, 12:16 PM IST

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಗುರುವಾರ ಚಾಂದಿನಿ ಚೌಕ್‌ ಪ್ರದೇಶದಲ್ಲಿರುವ ಖಾಸಗಿ ಕಂಪೆನಿಯ ಮೇಲೆ  ದಾಳಿ ನಡೆಸಿ 300 ಕ್ಕೂ ಹೆಚ್ಚು  ಲಾಕರ್‌ಗಳನ್ನು ಪರಿಶೀಲಿಸಿ 35 ಕೋಟಿಯಷ್ಟು  ಕಪ್ಪು ಹಣವನ್ನು ಜಪ್ತಿ ಮಾಡಿದ್ದಾರೆ.

300 ಲಾಕರ್‌ಗಳ ಪೈಕಿ 140 ಲಾಕರ್‌ಗಳನ್ನು ತೆರೆದು ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ಕಪ್ಪು ಹಣ ಪತ್ತೆಯಾಗಿದೆ.

ತಿಂಗಳ ಕಾಲ ನಡೆಸಿದ ತನಿಖೆಯಿಂದ, ದಾಖಲೆಯಿಲ್ಲದ 30 ಲಾಕರ್‌ಗಳನ್ನು ಪತ್ತೆ ಹಚ್ಚಲಾಗಿದ್ದು ಅವುಗಳಲ್ಲಿ 10 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ದಾಳಿಗೊಳಗಾದ ಫ‌ಕೀರ್‌ ಚಂದ್‌ ಲಾಕರ್ ಮತ್ತು ವಾಲ್ಟ್ ಪ್ರೈ.ಲಿ ಕಂಪೆನಿ ಐಟಿ ಆರೋಪಗಳನ್ನು ತಳ್ಳಿಹಾಕಿದ್ದು, ನಾವು ಆರ್‌ಬಿಐ ಮಾರ್ಗದರ್ಶನವನ್ನು ಅನುಸರಿಸಿದ್ದೇವೆ ಎಂದಿದೆ. 

ಹಲವು ಲಾಕರ್‌ಗಳನ್ನು ಕೆವೈಸಿ ಇಲ್ಲದೆ ಮಂಜೂರು ಮಾಡಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ತುಮಕೂರು: ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪದ್ಮಭೂಷಣ ಲಿಂ.ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರಥಮ...

  • ಬೆಂಗಳೂರು: ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಕೊನೆಗೂ ಶನಿವಾರ ನಡೆಯಿತು. ಸ್ಥಾನ ವಂಚಿತ ಕೆಲವು ಸದಸ್ಯರ ಅಸಮಾಧಾನ, ಆಕ್ರೋಶ, ಕಣ್ಣೀರಿನ ನಡುವೆಯೇ ಎಲ್ಲ...

  • ಬೆಂಗಳೂರು: ಒಳಚರಂಡಿ ಸಂಪರ್ಕ ಪಡೆಯದೇ ಅನಧಿಕೃತವಾಗಿ ಮಳೆನೀರು ಕಾಲುವೆಗೆ ಶೌಚಾಲಯ ಸೇರಿ ಮನೆಯ ತ್ಯಾಜ್ಯ ನೀರು ಹರಿಯಬಿಟ್ಟಿದ್ದೀರಾ? ಹಾಗಾದರೆ ನಿಮ್ಮ ಮನೆ ವಿದ್ಯುತ್‌...

  • ಬೆಂಗಳೂರು: ಭಾರತೀಯ ಸಂಸ್ಕೃತಿಯ ಬಾವುಟವನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯುವ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ...

  • ಬೆಂಗಳೂರು: "ನಾಟಕ ಕಂಪನಿ ನಡೆಸಲು ಸಾಲ ಕೊಟ್ಟವರು ಹಾರ್ಮೋನಿಯಂ ತೆಗೆದುಕೊಂಡು ಹೋಗುವಾಗ ತಾಯಿಯೊಬ್ಬರು ತನ್ನ ತಾಳಿ ಕೊಟ್ಟು ಸಾಲ ತೀರಿಸಿದ್ದರಿಂದಲೇ ಇಂದು...