ಹೊಸ ಟ್ರಾಫಿಕ್ ನೀತಿ ವಿಮೆ ಖರೀದಿ ಹೆಚ್ಚಳ
Team Udayavani, Sep 6, 2019, 5:10 AM IST
ಹೊಸದಿಲ್ಲಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡ ವಿಧಿಸುವ ಕಾನೂನು ಜಾರಿಗೆ ಬರುತ್ತಿದ್ದಂತೆಯೇ ಆನ್ಲೈನ್ ಮೂಲಕ ವಾಹನ ವಿಮೆ ಖರೀದಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಮೂರು ದಿನಗಳಲ್ಲಿ ಮಾರಾಟವಾದ ವಿಮೆ ಪೈಕಿ ಶೇ. 90ರಷ್ಟು ಜನರು ವಿಮೆ ಅವಧಿ ಮೀರಿದ್ದರಿಂದಾಗಿ ಖರೀದಿ ಮಾಡಿದ್ದಾರೆ ಎಂದು ಪಾಲಿಸಿ ಬಜಾರ್ ಸಂಸ್ಥೆ ಹೇಳಿದೆ. ಕಳೆದ ಮೂರು ದಿನಗಳಿಂದ ಪ್ರತಿ ದಿನ ನಾವು 30 ಸಾವಿರ ವಿಮೆ ಮಾರಾಟ ಮಾಡುತ್ತಿದ್ದೇವೆ. ಇದು ಕಾನೂನು ಜಾರಿಗೆ ಬರುವುದಕ್ಕೂ ಮೊದಲಿನ ವಹಿವಾಟಿಗೆ ಹೋಲಿಸಿದರೆ ದುಪ್ಪಟ್ಟಾಗಿದೆ ಎಂದು ಸಂಸ್ಥೆ ಹೇಳಿದೆ.
ನೂತನ ನಿಯಮದ ಪ್ರಕಾರ, ವಿಮೆ ಇಲ್ಲದೆ ವಾಹನ ಚಾಲನೆ ಮಾಡಿದರೆ ಮೊದಲ ಬಾರಿಗೆ 2 ಸಾವಿರ ರೂ. ಹಾಗೂ ಅನಂತರ 4 ಸಾವಿರ ರೂ. ದಂಡ ಪಾವತಿ ಮಾಡಬೇಕಾಗಿದೆ. ಹೀಗಾಗಿ ಹೆದರಿದ ಜನರು ವಿಮೆ ಖರೀದಿಗೆ ಮುಗಿಬೀಳುತ್ತಿದ್ದಾರೆ. ದೇಶದಲ್ಲಿ ಒಟ್ಟು 19 ಕೋಟಿ ವಾಹನಗಳಿದ್ದು, ಈ ಪೈಕಿ ಕೇವಲ 8.26 ಕೋಟಿ ವಾಹನಗಳಿಗೆ ಮಾತ್ರವೇ ವಿಮೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ