ಅಘ್ಘನ್ನರಿಗೆ ಭಾರತ ಅಭಯ

Team Udayavani, Aug 18, 2021, 7:30 AM IST

ಅಘ್ಘನ್ನರಿಗೆ ಭಾರತ ಅಭಯ

ಕಾಬೂಲ್‌: ಸೋಮವಾರ ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಕಂಡುಬಂದ ಘೋರ ದೃಶ್ಯಾವಳಿಗಳಿಗೆ ಮರುಗಿರುವ ಭಾರತವು, ಅಫ್ಘಾನ್‌ನಲ್ಲಿ ಅಸುರಕ್ಷಿತ ಭಾವನೆ ಎದುರಿಸುತ್ತಿರುವ ಅಲ್ಲಿನ ನಾಗರಿಕರಿಗೆ ಆಶ್ರಯ ನೀಡಲು ಮುಂದಾಗಿದೆ. ಅವರಿಗೆ ತುರ್ತು ಇ-ವೀಸಾ ಸೌಲಭ್ಯ ಕಲ್ಪಿಸುವುದಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಗಳವಾರ ಘೋಷಿಸಿದೆ.

ಯುದ್ಧಗ್ರಸ್ತ ಅಫ್ಘಾನಿಸ್ಥಾನದಿಂದ ಬರುವ ಎಲ್ಲರಿಗೂ “ಇ-ಎಮರ್ಜೆನ್ಸಿ ಎಕ್ಸ್‌-ಮಿಸ್ಕ್ ವೀಸಾ’ ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್‌ ವೀಸಾ ಒದಗಿಸಲು ಸರಕಾರ ನಿರ್ಧರಿಸಿದೆ. ಈ ವೀಸಾವನ್ನು ಧರ್ಮಾಧಾರಿತ ಆದ್ಯತೆ ಮೇರೆಗೆ ನೀಡಲಾಗುವುದಿಲ್ಲ. ಎಲ್ಲ ಅಫ್ಘಾನ್‌ ನಾಗರಿಕರೂ ಅರ್ಜಿ ಸಲ್ಲಿಸಬಹುದು ಎಂದು ಸರಕಾರ ತಿಳಿಸಿದೆ. ಈವರೆಗೆ ಇದ್ದ ನಿಯಮದ ಪ್ರಕಾರ ಅಫ್ಘಾನ್‌ ನಾಗರಿಕರನ್ನು ಈ ವರ್ಗದ ವೀಸಾದಿಂದ ಹೊರಗಿಡಲಾಗಿತ್ತು. ವೀಸಾಕ್ಕಾಗಿ ಅರ್ಜಿ ಸಲ್ಲಿಸುವ ವ್ಯಕ್ತಿ ಸ್ವತಃ ಅಲ್ಲಿನ ರಾಯಭಾರ ಕಚೇರಿಗೆ ಭೇಟಿ ನೀಡ ಬೇಕಾಗಿತ್ತು. ಆದರೆ ಈಗ ಕಾಬೂಲ್‌ನ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಇ-ವೀಸಾ ಸೌಲಭ್ಯ ಕಲ್ಪಿಸಲು ಸರಕಾರ ನಿರ್ಧರಿಸಿದೆ.

ಪರಿಶೀಲನೆ ಬಳಿಕವೇ ವೀಸಾ :

ಎಲ್ಲ ಅಘ್ಗನ್ನರೂ ವೀಸಾಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ದಿಲ್ಲಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಯಾರಿಗೆ ವೀಸಾ ನೀಡಬಹುದು ಎಂದು ನಿರ್ಧರಿಸ ಲಾಗುತ್ತದೆ. ಆರಂಭದಲ್ಲಿ 6 ತಿಂಗಳ ಮಟ್ಟಿಗೆ ವೀಸಾ ನೀಡ ಲಾಗುತ್ತದೆ. ಸಲ್ಲಿಸಬೇಕಾದ ದಾಖಲೆ ಗಳ ವಿವರವನ್ನು ಸದ್ಯವೇ ಅಪ್‌ಲೋಡ್‌ ಮಾಡಲಾಗುತ್ತದೆ.

ಮೋದಿ ತುರ್ತು ಸಭೆ :

ಮಂಗಳವಾರ ಸಂಜೆ ಪ್ರಧಾನಿ ಮೋದಿ ಸಂಪುಟ ಸಮಿತಿಯೊಂದಿಗೆ ಉನ್ನತ ಸಭೆ ನಡೆಸಿದ್ದಾರೆ. ಅಫ್ಘಾನ್‌ ಪರಿಸ್ಥಿತಿ ಚರ್ಚಿಸಲಾಗಿದ್ದು, ಗೃಹ ಸಚಿವ ಅಮಿತ್‌ ಶಾ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ರಾಷ್ಟ್ರೀಯ ಭದ್ರತ ಸಲಹೆಗಾರ ಅಜಿತ್‌ ದೋವಲ್‌ ಭಾಗಿಯಾಗಿದ್ದರು.

ಕಾಬೂಲ್‌ ಹಾಗೂ ಇತರ ನಗರ ಗಳಿಗೆ ಎಷ್ಟು ಬೇಕಾ ದರೂ ವಿಮಾನಗಳನ್ನು ಕಳುಹಿಸಿ ಅಲ್ಲಿರುವ ಎಲ್ಲ ಭಾರತೀಯರನ್ನು ಕರೆತನ್ನಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಅಫ್ಘಾನ್‌ನಲ್ಲಿ ರಾಜ್ಯದ ನಾಗರಿಕರು ತೊಂದರೆಗೆ ಸಿಲುಕಿ ದ್ದಾರೆಯೇ ಅಥವಾ ರಾಜ್ಯದಲ್ಲಿರುವ ಅಫ್ಘಾನ್‌ ಪ್ರಜೆಗಳಿಗೆ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ನಮ್ಮ ರಾಜ್ಯ  ದವರು ತೊಂದರೆಗೆ ಸಿಲುಕಿದ್ದರೆ ಅವ  ರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಪಡೆಯಲು ಸೂಚಿಸಲಾಗುವುದು.– ಅರಗ ಜ್ಞಾನೇಂದ್ರ, ಗೃಹ ಸಚಿವ

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.