ಭಾರತದಲ್ಲಿ 24ಗಂಟೆಯಲ್ಲಿ 10,649 ಕೋವಿಡ್ ಸೋಂಕು ಪ್ರಕರಣ ಪತ್ತೆ, 36 ಮಂದಿ ಸಾವು
ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,452ಕ್ಕೆ ಏರಿಕೆಯಾಗಿದೆ
Team Udayavani, Aug 24, 2022, 12:16 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 10,649 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,442ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಆಗಸ್ಟ್ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ: ದಂಪತಿ ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,37,44,301ಕ್ಕೆ ಏರಿಕೆಯಾಗಿದೆ. ಮಂಗಳವಾರ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,506ರಷ್ಟಿತ್ತು ಎಂದು ವರದಿ ಹೇಳಿದೆ.
24ಗಂಟೆಯಲ್ಲಿ ಕೋವಿಡ್ ನಿಂದ 36 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,452ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಒಂದೇ ದಿನದಲ್ಲಿ ದೇಶದಲ್ಲಿ 64 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.62ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.32ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ