
ಅಯೋಧ್ಯೆ ತೀರ್ಪು: ಗೊಗೊಯ್ ಪ್ರಶಂಸಿಸಿ ಪತ್ರ ಬರೆದರೇ ಪ್ರಧಾನಿ ಮೋದಿ?
Team Udayavani, Nov 13, 2019, 11:41 PM IST

ನವದೆಹಲಿ: ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಅಯೋಧ್ಯಾ ತೀರ್ಪನ್ನು ಸುಪ್ರೀಂ ಕೋರ್ಟಿನ ಐವರು ಸದಸ್ಯರ ಸಾಂವಿಧಾನಿಕ ಪೀಠ ನೀಡಿ ನಾಲ್ಕು ದಿನಗಳು ಕಳೆದಿದೆ. ದೇಶವಾಸಿಗಳ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹೆಚ್ಚಿನ ರಾಜಕೀಯ ನಾಯಕರು ಮತ್ತು ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಸುಪ್ರೀಂ ಕೋರ್ಟಿನ ಈ ತೀರ್ಪನ್ನು ಸ್ವಾಗತಿಸಿದ್ದಾರೆ.
ಆದರೆ ಇಲ್ಲೊಂದು ಬೆಳವಣಿಗೆಯಲ್ಲಿ ಪ್ರಧಾನಿ ಮೋದಿ ಅವರು ಈ ತೀರ್ಪು ನೀಡಿದ ಪಂಚ ಸದಸ್ಯ ಪೀಠದ ಐವರಲ್ಲಿ ಒಬ್ಬರಾಗಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಪ್ರಶಂಸಿಸಿ ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಇದೀಗ ಚರ್ಚೆಯ ವಸ್ತುವಾಗಿದೆ. ಇನ್ನೂ ವಿಶೇಷವೆಂದರೆ ಈ ವಿವಾದಾತ್ಮಕ ಪತ್ರ ಬಾಂಗ್ಲಾ ದೇಶದ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಅಯೋಧ್ಯೆಯ ವಿವಾದಿತ ಬಾಬ್ರಿ ಮಸೀದಿ ಇದ್ದ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟು ‘ಹಿಂದೂ ರಾಷ್ಟ್ರ’ ನಿರ್ಮಾಣಕ್ಕೆ ಹಾದಿ ಸುಗಮ ಮಾಡಿಕೊಟ್ಟಿರುವ ಈ ಐತಿಹಾಸಿಕ ತೀರ್ಪಿಗೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಸೇರಿದಂತೆ ಪಂಚ ಸದಸ್ಯರ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಡಿ. ವೈ. ಚಂದ್ರಚೂಢ್, ಮತ್ತು ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರನ್ನು ಪ್ರಶಂಸಿಸಿ ಸ್ವತಃ ಪ್ರಧಾನಿ ಮೋದಿ ಅವರು ಈ ಪತ್ರ ಬರೆದಿರುವಂತೆ ಇದನ್ನು ರಚಿಸಲಾಗಿದೆ. ಮಾತ್ರವಲ್ಲದೇ ಈ ಪತ್ರದ ಕೆಳಗೆ ಪ್ರಧಾನ ಮಂತ್ರಿ ಅವರ ಸಹಿಯೂ ಇದೆ.
ಬಾಂಗ್ಲಾದ ವಿವಿಧ ಮಾಧ್ಯಮಗಳಲ್ಲಿ ಈ ನಕಲು ಪತ್ರ ಪ್ರಕಟಗೊಂಡಿರುವುದಕ್ಕೆ ಭಾರತೀಯ ವಿದೇಶಾಂಗ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು. ಇದು ದೇಶದೊಳಗಿನ ಎರಡು ಸಮುದಾಯಗಳ ನಡುವಿನ ಶಾಂತಿ ಕದಡುವ ಪ್ರಯತ್ನವಾಗಿದೆ ಮತ್ತು ಭಾರತ ಮತ್ತು ಬಾಂಗ್ಲಾ ದೇಶಗಳ ಜನರ ನಡುವಿನ ಸ್ನೇಹ ಸಂಬಂಧವನ್ನು ಕೆಡಿಸಲು ವಿಚ್ಛಿದ್ರಕಾರಿ ಶಕ್ತಿಗಳು ಕೈಗೊಂಡಿರುವ ವ್ಯರ್ಥ ಪ್ರಯತ್ನವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಟ್ವೀಟ್ ಮೂಲಕ ಖಂಡಿಸಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಈ ಪತ್ರ ಫೇಕ್ ಎಂದು ಸ್ಪಷ್ಟಪಡಿಸಿದೆ.
We strongly condemn those responsible for deliberately spreading such fake and malicious news, to divide communities, create disharmony and undermine friendship between the people of India and Bangladesh. https://t.co/LEdXxutzNc
— Raveesh Kumar (@MEAIndia) November 13, 2019
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
