ಮೂವರು ಹಿಂದು ಬಾಲಕಿಯರ ಅಪಹರಣ; ಭಾರತದಿಂದ ಪಾಕ್ ಅಧಿಕಾರಿಗಳಿಗೆ ಸಮನ್ಸ್

ಈ ಬೆಳವಣಿಗೆಯಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುವಂತಾಗಿದೆ

Team Udayavani, Jan 18, 2020, 10:23 AM IST

ನವದೆಹಲಿ:ಇತ್ತೀಚೆಗೆ ಪಾಕಿಸ್ತಾನದಲ್ಲಿ ಮೂವರು ಅಪ್ರಾಪ್ತ ಹಿಂದು ಬಾಲಕಿಯರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗೆ ಸಮನ್ಸ್ ನೀಡಿದ್ದು, ಈ ಬಗ್ಗೆ ಭಾರತ ತೀವ್ರವಾಗಿ ಪ್ರತಿಭಟಿಸಿದೆ ಎಂದು ವರದಿ ತಿಳಿಸಿದೆ.

ಜನವರಿ 14ರಂದು ಶಾಂತಿ ಮತ್ತು ಸರ್ಮಿ ಮೇಘವಾಲ್ ಎಂಬ ಇಬ್ಬರು ಅಪ್ರಾಪ್ತ ಹಿಂದು ಬಾಲಕಿಯನ್ನು ಹಾಗೂ ಜನವರಿ 15ರಂದು ಮೇಹಕ್ ಎಂಬ ಬಾಲಕಿಯನ್ನು ಅಪಹರಿಸಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಧಿಕಾರಿಗಳು ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ಪಾಕಿಸ್ತಾನಿ ಅಧಿಕಾರಿಗಳು ಪಾಕ್ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಜಮ್ಮು-ಕಾಶ್ಮೀರ ವಿಚಾರದಲ್ಲಿ ಇತ್ತೀಚೆಗೆ ಘರ್ಷಣೆ ನಡೆಯುತ್ತಿರುವ ನಡುವೆಯೇ ನಡೆದಿರುವ ಈ ಬೆಳವಣಿಗೆಯಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ