ವಾಯುಪಡೆ ಹೆಲಿಕಾಪ್ಟರ್ ಪತನ: 7 ಯೋಧರು ಹುತಾತ್ಮ
Team Udayavani, Oct 7, 2017, 9:20 AM IST
ಹೊಸದಿಲ್ಲಿ: ವಾಯುಪಡೆಯ ರಷ್ಯಾ ನಿರ್ಮಿತ ಎಂಐ-17 ಸುಧಾರಿತ ಹೆಲಿಕಾಪ್ಟರ್ವೊಂದು ಶುಕ್ರವಾರ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಏಳು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಪೈಲಟ್ಗಳು ಸೇರಿದಂತೆ ವಾಯುಪಡೆಯ ಐವರು ಹಾಗೂ ಸೇನೆಯ ಇಬ್ಬರು ಯೋಧರು ಅಸುನೀಗಿದ್ದಾರೆ ಎಂದು ವಾಯಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಚೀನ ಗಡಿಗೆ ಹೊಂದಿಕೊಂಡಿರುವ ತವಾಂಗ್ ಪ್ರದೇಶದಲ್ಲಿ ಶುಕ್ರವಾರ ಬೆಳಗಿನ ಜಾವ ಈ ದುರಂತ ಸಂಭವಿಸಿದೆ. ಇದು ರಷ್ಯಾನಿರ್ಮಿತ ಹೆಲಿಕಾಪ್ಟರ್ ಆಗಿದ್ದು, ಸೇನಾ ಸಿಬಂದಿಗೆ ಅಗತ್ಯ ಪರಿಕರಗಳನ್ನು ಹೊತ್ತು ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ