2017ರಲ್ಲಿ 138 ಪಾಕ್ ಸೈನಿಕರ ಹತ್ಯೆ
Team Udayavani, Jan 11, 2018, 10:02 AM IST
ಹೊಸದಿಲ್ಲಿ: ಪದೇ ಪದೆ ಭಾರತವನ್ನು ಒಂದಲ್ಲಾ ಒಂದು ರೀತಿಯಿಂದ ಕೆಣಕುತ್ತಲೇ ಬಂದಿರುವ ಪಾಕಿಸ್ಥಾನವನ್ನು ಭಾರತೀಯ ಭದ್ರತಾ ಪಡೆ ಕಳೆದೊಂದು ವರ್ಷದ ಅಂತರದಲ್ಲಿ ಸೊಕ್ಕು ಮುರಿದು ಕೂರಿಸಿದೆ. 2017ರಲ್ಲಿ ಅಕ್ರಮವಾಗಿ ಜಮ್ಮು ಕಾಶ್ಮೀರದ ಗಡಿ ನುಸುಳಿಬಂದ ಹಾಗೂ ಯುದ್ಧತಂತ್ರಕ್ಕಾಗಿ ನಡೆಸಲಾದ ಕಾರ್ಯಾಚರಣೆ ಗಳಲ್ಲಿ ಬರೋಬ್ಬರಿ 138 ಪಾಕಿಸ್ಥಾನಿ ಯೋಧರನ್ನು ಹೊಡೆದುರುಳಿಸಿ ಪ್ರತೀಕಾರ ತೀರಿಸಿಕೊಂಡಿದೆ ಎಂದು ಗುಪ್ತಚರ ಇಲಾಖೆ ಮೂಲ ತಿಳಿಸಿದೆ.
ಮೂಲಗಳ ಪ್ರಕಾರ, ಪಾಕಿಸ್ಥಾನ ಯೋಧರ ಲ್ಲದೆ, ಭಯೋತ್ಪಾದನೆ ಚಟುವಟಿಕೆ ನಡೆಸಿದ 155ಕ್ಕೂ ಹೆಚ್ಚು ಮಂದಿಯನ್ನು ಕಳೆದುಕೊಂಡಿದೆ. ಅಲ್ಲದೆ, ಇದೇ ಅವಧಿಯಲ್ಲಿ ಭಾರತೀಯ ಸೇನೆಯೂ ಒಟ್ಟು 28 ಯೋಧರನ್ನು ಕಳೆದು ಕೊಂಡಿದೆ. ಪ್ರತ್ಯೇಕ ಘಟನೆಗಳಲ್ಲಿ 70 ಯೋಧರು ಗಾಯಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್, “ಪಾಕ್ ನಡೆಸಿದ ಎಲ್ಲಾ ದಾಳಿಯನ್ನೂ ಸೂಕ್ತವಾಗಿ ಎದುರಿಸಿ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಇಷ್ಟಾದರೂ ಪಾಕ್ ತನ್ನ ಚಾಳಿ ಬಿಟ್ಟಿಲ್ಲ’ ಎಂದಿದ್ದಾರೆ. ಅಧಿಕೃತ ಮಾಹಿತಿ ಪ್ರಕಾರ, 2017ರಲ್ಲಿ 860 ಬಾರಿ ಪಾಕಿಸ್ಥಾನವು ಕದನ ವಿರಾಮ ಉಲ್ಲಂಘಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು