ಸೂರ್ಯಕಾಂತಿ ಎಣ್ಣೆ ಆಮದು ಶೇ.89.6 ಹೆಚ್ಚಳ
Team Udayavani, Sep 14, 2022, 6:55 AM IST
ಹೊಸದಿಲ್ಲಿ: ಉಕ್ರೇನ್ ಬಿಕ್ಕಟ್ಟು ಆರಂಭವಾದ ಬಳಿಕ, ರಷ್ಯಾ ಮತ್ತು ಅರ್ಜೆಂಟೀನಾಗಳು ಭಾರತಕ್ಕೆ ಪ್ರಮುಖ ಸೂರ್ಯಕಾಂತಿ ಎಣ್ಣೆ ಪೂರೈಕೆದಾರ ರಾಷ್ಟ್ರಗಳಾಗಿ ಹೊರಹೊಮ್ಮಿವೆ. ಆಗಸ್ಟ್ ತಿಂಗಳಲ್ಲಿ ಭಾರತವು ಬರೋಬ್ಬರಿ 1.35 ಲಕ್ಷ ಟನ್ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಂಡಿದೆ.
ರಷ್ಯಾ-ಉಕ್ರೇನ್ ಯುದ್ಧಕ್ಕೆ ಮುನ್ನ ಭಾರ ತವು ಆಮದು ಮಾಡಿಕೊಳ್ಳುತ್ತಿದ್ದ ಸೂರ್ಯ ಕಾಂತಿ ಎಣ್ಣೆಯ ಪೈಕಿ ಶೇ.70ರಷ್ಟನ್ನು ಉಕ್ರೇನ್ ಪೂರೈಸುತ್ತಿತ್ತು. ಶೇ.20ರಷ್ಟನ್ನು ರಷ್ಯಾದಿಂದ ತರಿಸಲಾಗುತ್ತಿತ್ತು. ಆದರೆ ಯುದ್ಧ ಆರಂಭವಾದ ಬಳಿಕ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದ್ದು, ಈಗ ರಷ್ಯಾ ಮತ್ತು ಅರ್ಜೆಂಟೀನಾವೇ ಹೆಚ್ಚಿನ ಪ್ರಮಾಣದಲ್ಲಿ ಭಾರತಕ್ಕೆ ಈ ಎಣ್ಣೆಯನ್ನು ಸರಬರಾಜು ಮಾಡುತ್ತಿವೆ.
ಕಳೆದ ವರ್ಷದ ಆಗಸ್ಟ್ನಲ್ಲಿ ಭಾರತ 71,340 ಟನ್ ಎಣ್ಣೆಯನ್ನು ಆಮದು ಮಾಡಿಕೊಂಡಿತ್ತು. ಈ ವರ್ಷದ ಆಗಸ್ಟ್ನಲ್ಲಿ ಅದು 1.35 ಲಕ್ಷ ಟನ್ಗೆàರಿದೆ. ಅಂದರೆ ಶೇ.89.6ರಷ್ಟು ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!