ಡಾಲರ್ ಮಾರಿದ ಆರ್ಬಿಐ
Team Udayavani, Sep 29, 2022, 9:30 PM IST
ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಕುಸಿತ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಳಿ ಇರುವ ಒಂದಷ್ಟು ಡಾಲರ್ಗಳನ್ನು ಮಾರಾಟ ಮಾಡಿದೆ ಎಂದು ಹೇಳಲಾಗಿದೆ.
ಈ ಮೂಲಕ ಕುಸಿಯುತ್ತಿರುವ ರೂಪಾಯಿಯನ್ನು ಸ್ಥಿರಗೊಳಿಸುವ ಪ್ರಯತ್ನ ಮಾಡಿದೆ. ಇದರಿಂದಾಗಿ ಗುರುವಾರ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ದಿನಾಂತ್ಯಕ್ಕೆ ಅಮೆರಿಕದ ಡಾಲರ್ ಎದುರು ರೂಪಾಯಿ 13 ಪೈಸೆ ಏರಿಕೆಯಾಗಿ 81.80 ರೂ.ಗೆ ಮುಕ್ತಾಯಗೊಂಡಿದೆ. ಮಧ್ಯಂತರದಲ್ಲಿ 81.58 ರೂ.ಗೆ ಏರಿಕೆಯಾಗಿತ್ತು. ಬುಧವಾರದ ವಹಿವಾಟಿನಲ್ಲಿ 82 ರೂ.ಗೆ ಕುಸಿದು, ದಿನಾಂತ್ಯಕ್ಕೆ 81.93 ರೂ.ಗೆ ವಹಿವಾಟು ಕೊನೆಗೊಳಿಸಿತ್ತು. ಈ ವಾರದ ಆರಂಭದಿಂದಲೂ ರೂಪಾಯಿ ಕುಸಿತದ ಶ್ರೇಯಾಂಕವನ್ನೇ ದಾಖಲಿಸುತ್ತಾ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ