ನಿರುದ್ಯೋಗ ಪ್ರಮಾಣ ಶೇ.6.86ಕ್ಕೆ ಇಳಿಕೆ
Team Udayavani, Oct 8, 2021, 7:20 AM IST
ಹೊಸದಿಲ್ಲಿ: ದೇಶದಲ್ಲಿ ಆಗಸ್ಟ್ ತಿಂಗಳಲ್ಲಿ ಶೇ. 8.32ರಷ್ಟಿದ್ದ ನಿರುದ್ಯೋಗ ಪ್ರಮಾಣವು ಸೆಪ್ಟಂಬರ್ನಲ್ಲಿ ಶೇ. 6.86ಕ್ಕೆ ಇಳಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣ ಕೇಂದ್ರ (ಸಿಎಂಇಐ) ತಿಳಿಸಿದೆ.
ಆಗಸ್ಟ್ನಲ್ಲಿ ಶೇ. 37.15ರಷ್ಟಿದ್ದ ಉದ್ಯೋಗ ಪ್ರಮಾಣವು ಸೆಪ್ಟಂಬರ್ನಲ್ಲಿ ಶೇ. 37.87ಕ್ಕೆ ಏರಿಕೆಯಾಗಿದೆ. ಒಂದೇ ತಿಂಗಳಲ್ಲಿ 85 ಲಕ್ಷ ಉದ್ಯೋಗ ಸೃಷ್ಟಿಯಾಗಿದ್ದು, ಅದರಲ್ಲಿ ಹೆಚ್ಚಿನ ಪಾಲು ಗ್ರಾಮೀಣ ಪ್ರದೇಶದಲ್ಲೇ ಆಗಿದೆ. ಕಟ್ಟಡ, ರಸ್ತೆ ನಿರ್ಮಾಣ ಕಾಮಗಾರಿ ಕ್ಷೇತ್ರದಲ್ಲೇ ಅತೀ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ ಎಂದು ತಿಳಿಸಲಾಗಿದೆ.
ಸೆಪ್ಟಂಬರ್ನಲ್ಲಿ ಒಟ್ಟು 40.62 ಕೋಟಿ ಮಂದಿಗೆ ಉದ್ಯೋಗವಿತ್ತು ಎಂದು ಅಂದಾಜಿಸಲಾಗಿದೆ. ಇದು ಕಳೆದ 20 ತಿಂಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಾಗಿದೆ. ಕೊರೊನಾಕ್ಕೂ ಮೊದಲು 40.89 ಕೋಟಿ ಮಂದಿಗೆ ಉದ್ಯೋಗವಿತ್ತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್