ಇಂದ್ರಾಣಿ ಮುಖರ್ಜಿ: ಹಠಾತ್ ಹದಗೆಟ್ಟ ಆರೋಗ್ಯ, ಜೆಜೆ ಆಸ್ಪತ್ರೆಗೆ
Team Udayavani, Apr 7, 2018, 3:44 PM IST
ಮುಂಬಯಿ : ಭಾರೀ ಕುತೂಹಲ ಕೆರಳಿಸಿದ್ದ ಮತ್ತು ಅಷ್ಟೇ ನಿಗೂಢತೆಯಿಂದ ತುಂಬಿದ್ದ ಶೀನಾ ಬೋರಾ ಮರ್ಡರ್ ಕೇಸಿನ ಪ್ರಮುಖ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿ ಅವರ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ಆಕೆಯನ್ನು ನಿನ್ನೆ ಶುಕ್ರವಾರ ತಡರಾತ್ರಿ ಬೈಕುಲಾ ಜೈಲಿನಿಂದ ಜೆಜೆ ಆಸ್ಪತ್ರೆಗೆ ಸೇರಿಸಲಾಯಿತು.
ಇಂದ್ರಾಣಿ ಮುಖರ್ಜಿ ಅವರು ಸೇವಿಸುವ ಔಷಧಿಯ ಓವರ್ ಡೋಸ್ ನೀಡಲಾದ ಕಾರಣ ಆಕೆಯ ಆರೋಗ್ಯ ಹದಗೆಟ್ಟಿರಬಹುದೆಂದು ಶಂಕಿಸಲಾಗಿದೆ.
ಇಂದ್ರಾಣಿ ಅವರ ಹದಗೆಟ್ಟ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳಾಗಲೀ ಜೈಲು ಅಧಿಕಾರಿಗಳಾಗಲೀ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಈ ಹಿಂದೆಯೂ ಒಮ್ಮೆ ಔಷಧದ ಓವರ್ ಡೋಸ್ ಸೇವನೆಯಿಂದ ಇಂದ್ರಾಣಿ ಆರೋಗ್ಯ ಹದಗೆಟ್ಟು ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಮೂಲಗಳ ಪ್ರಕಾರ ಇಂದ್ರಾಣಿ ಮುಖರ್ಜಿಯನ್ನು ಐಸಿಯು ನಲ್ಲಿ ಇರಿಸಲಾಗಿದ್ದು ಆಕೆಯ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ