ಆಸ್ಪತ್ರೆ ಎಡವಟ್ಟಿನಿಂದ ಕ್ಯಾನ್ಸರ್ ಬಾಲಕಿಗೆ ಎಚ್ಐವಿ ಸೋಂಕು
Team Udayavani, Sep 16, 2017, 9:19 AM IST
ತಿರುವನಂತಪುರ: ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದ ಬಾಲಕಿಗೆ ಹೊಸ ರಕ್ತ ನೀಡಿದ ಬಳಿಕ ಆಕೆಯಲ್ಲಿ ಎಚ್ಐವಿ ಸೋಂಕು ಇರುವುದು ಪತ್ತೆಯಾಗಿದೆ. ತಿರುವನಂತಪುರದ ಪ್ರಾದೇಶಿಕ ಕ್ಯಾನರ್ ಕೇಂದ್ರ (ಆರ್ಸಿಸಿ)ದಲ್ಲಿ ಈ ಎಡವಟ್ಟು ನಡೆದಿದೆ. ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇರಳ ಸರಕಾರ ತನಿಖೆಗೆ ಆದೇಶ ನೀಡಿದೆ.
ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ಬಾಲಕಿಗೆ ಆರಂಭಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಕೆಯನ್ನು ತಿರುವನಂತಪುರದಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. ಇಲ್ಲಿಗೆ ಬಂದ ಬಳಿಕ ಹೊಸ ರಕ್ತ ನೀಡಲಾಯಿತು. ಕಣ್ಣಿನ ಒಂದು ಬದಿಯಲ್ಲಿ ಊತ ಕಂಡು ಬಂದ ಹಿನ್ನೆಲೆ ಯಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸಿದ ಈ ವೇಳೆ ಸೋಂಕು ಪತ್ತೆಯಾಯಿತು. ಈ ಬಗ್ಗೆ ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದರು.
ಕ್ಯಾನ್ಸರ್ ಸಂಸ್ಥೆ ಕೂಡ ಆಂತರಿಕವಾಗಿ ತನಿಖೆ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿಗೆ ಸೂಚಿಸಿದ್ದಾರೆ. ಸರಕಾರ ಬಾಲಕಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ