ಮಾಹಿತಿ ಸೋರಿಕೆ ಗಂಭೀರದ್ದು
Team Udayavani, Jan 21, 2021, 3:05 AM IST
ಹೊಸದಿಲ್ಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹವಾಗಿದೆ ಎಂದು ರಕ್ಷಣ ಖಾತೆ ಮಾಜಿ ಸಚಿವ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣ ಸಚಿವ ರಾಜನಾಥ್ ಸಿಂಗ್ ಈ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಾಲಾ ಕೋಟ್ ದಾಳಿಗೆ ಸಂಬಂಧಿಸಿದಂತೆ ಮಾಹಿತಿ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಮುಂಚಿತವಾಗಿಯೇ ಗೊತ್ತಿತ್ತು ಮತ್ತು ಅದಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿರುವ ವಾಟ್ಸ್ಆ್ಯಪ್ ಚರ್ಚೆಗೆ ಸಂಬಂಧಿಸಿದಂತೆ ಆ್ಯಂಟನಿ ಈ ಮಾತುಗಳನ್ನಾಡಿದ್ದಾರೆ.
“ಸೇನಾ ಕಾರ್ಯಾಚರಣೆಗೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುವುದು ಕ್ಷಮಾ ರಹಿತ ಅಪರಾಧ. ಅದನ್ನು ದೇಶದ್ರೋಹವೆಂದೇ ಪರಿಗಣಿಸಲಾ ಗುತ್ತದೆ. ಅಂಥ ಕೃತ್ಯವೆಸಗಿದವರನ್ನು ಶಿಕ್ಷಿಸ ಬೇಕು’ ಎಂದು ಆ್ಯಂಟನಿ ಹೇಳಿದ್ದಾರೆ.
ದೇಶದ ಇತಿಹಾಸ ದಲ್ಲಿಯೇ ಮೊದಲ ಬಾರಿಗೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲಾಗಿದೆ. ಪ್ರಧಾನಿಗಳ ಕಾರ್ಯಾಲಯ, ಗೃಹ ಸಚಿವರು, ಕಾನೂನು ಸಚಿವರು, ವಾರ್ತಾ ಮತ್ತು ಪ್ರಸಾರ
ಸಚಿವರ ಕಾರ್ಯಾಲಯಗಳಲ್ಲಿಯೂ ರಾಷ್ಟ್ರೀಯ ಭದ್ರತೆಯ ವಿಚಾರಗಳಿಗೆ ಸಂಬಂಧಿಸಿದಂತೆ ರಾಜಿಯನ್ನೇ ಮಾಡಿಕೊಳ್ಳಲಾಗಿದೆ ಎಂದರು ಆ್ಯಂಟನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ