ಷೇರು ಹಿಂಪಡೆಯಲು ಇನ್ಫೋಸಿಸ್ ಚಿಂತನೆ?
Team Udayavani, Feb 8, 2017, 8:21 AM IST
ಮುಂಬಯಿ: ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ಷೇರುದಾರರಿಂದ 12 ಸಾವಿರ ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವ ಬಗ್ಗೆ ಚಿಂತನೆ ನಡೆಸಿದೆ. ಷೇರುದಾರರು ಈ ಬಗ್ಗೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿಕೊಳ್ಳುತ್ತಿದ್ದರೂ ಕಂಪೆನಿ ಯೋಚಿಸಿರಲಿಲ್ಲ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಸದ್ಯ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಲಾಗಿದೆ. ಇದರಿದಾಗಿ ಷೇರುದಾರರಿಗೆ ಭಾರಿ ಪ್ರಮಾಣದಲ್ಲಿ ನಗದು ಪೂರೈಕೆಯಾಗಲಿದೆ. ಸದ್ಯ ಮಾರುಕಟ್ಟೆಯಲ್ಲಿ ಐಟಿ ದಿಗ್ಗಜ 38 ಸಾವಿರ ಕೋಟಿ ರೂ. ನಗದು ಹೊಂದಿದೆ. ಇಂಥದ್ದೊಂದು ವರದಿ ಪ್ರಕಟವಾಗುತ್ತಿದ್ದಂತೆಯೇ ಷೇರು ಪೇಟೆಯಲ್ಲಿ ಇನ್ಫೋಸಿಸ್ ಷೇರುಗಳು ಶೇ.1.1ರಷ್ಟು ಏರಿಕೆ ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ