ಇನ್ಫೋಸಿಸ್ ಲಾಭಾಂಶದಲ್ಲಿ ಶೇ.1.3ರಷ್ಟು ಏರಿಕೆ
Team Udayavani, Jul 15, 2017, 3:10 AM IST
ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ಸಂಸ್ಥಾಪಕರು ಮತ್ತು ಆಡಳಿತ ಮಂಡಳಿ ನಡುವೆ ಹಲವು ವಿಚಾರಕ್ಕೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಅದು ಮುಕ್ತಾಯವಾಗಿರುವ ಬೆನ್ನಲ್ಲೇ ಗುರುವಾರ ಬೆಂಗಳೂರಿನಲ್ಲಿ ಹಾಲಿ ಹಣಕಾಸು ವರ್ಷದ ಮೊದಲ ತ್ತೈಮಾಸಿಕ ಸಭೆ ನಡೆಯಿತು. ಅದರದಲ್ಲಿ 3,483 ಕೋಟಿ ರೂ. ಲಾಭ ಪಡೆದುಕೊಂಡಿದೆ. ಅಂದರೆ ಶೇ.1.3ರಷ್ಟು ಹೆಚ್ಚಾಗಿದೆ. ಆದರೆ ಕಳೆದ ಹಣಕಾಸು ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.3.3ರಷ್ಟು ಇಳಿಕೆಯಾಗಿದೆ. ಒಟ್ಟಾರೆ ಶೇ.24.1ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಭೆಗೆ ಸಿಇಒ ಸಿಕ್ಕಾ ಮೈಸೂರಿನ ಇನ್ಫಿ ಕ್ಯಾಂಪಸ್ನಲ್ಲಿ ಅಭಿವೃದ್ಧಿಪಡಿಸಲಾಗಿರುವ ಚಾಲಕರಹಿತ ಕಾರಿನಲ್ಲಿ ಆಗಮಿಸಿದರು.
ಕೃತಕ ಬುದ್ಧಿಮತ್ತೆಯತ್ತ ಗಮನ: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ನತ್ತ (ಕೃತಕ ಬುದ್ಧಿಮತ್ತೆ) ಗಮನ ಹರಿಸಿದೆ ಎಂದಿದ್ದಾರೆ ವಿಶಾಲ್ ಸಿಕ್ಕಾ. ಕಂಪನಿಯ ಗ್ರಾಹಕರಿಗೆ ಸೈಬರ್ ಸೆಕ್ಯುರಿಟಿ, ಇಂಟರ್ನೆಟ್ ಆಫ್ ಥಿಂಗ್ಸ್, ಡೇಟಾ ಸುರಕ್ಷತೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ನೆರವು ನೀಡಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು