ಐಎನ್‌ಎಸ್ ವಿಕ್ರಾಂತ್‌ಗೆ ಶೀಘ್ರ ಯುದ್ಧ ವಿಮಾನಗಳ ನಿಯೋಜನೆ: ಹರಿಕುಮಾರ್
Team Udayavani, Nov 30, 2022, 8:45 PM IST
ಪುಣೆ: ದೇಶೀಯವಾಗಿ ನಿರ್ಮಿಸಲಾದ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ಗೆ ಮುಂದಿನ ವರ್ಷದ ಮೇ ಅಥವಾ ಜೂನ್ ವೇಳೆಗೆ ಪುರ್ಣ ಪ್ರಮಾಣದಲ್ಲಿ ಯುದ್ಧ ವಿಮಾನಗಳನ್ನು ನಿಯೋಜಿಸುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಭಾರತೀಯ ನೌಕಾ ಪಡೆಯ ಮುಖ್ಯಸ್ಥರಾದ ಅಡ್ಮಿರಲ್ ಆರ್.ಹರಿಕುಮಾರ್ ತಿಳಿಸಿದರು.
ಮಹಾರಾಷ್ಟ್ರದ ಪುಣೆಯ ಖಡಕ್ವಾಸ್ಲಾದಲ್ಲಿರುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ (ಎನ್‌ಡಿಎ) ಬುಧವಾರ ನಡೆದ ನಿರ್ಗಮನ ಪಥ ಸಂಚಲನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐಎನ್‌ಎಸ್ ವಿಕ್ರಾಂತ್ ಪರೀಕ್ಷೆ ಈಗಾಗಲೇ ಮುಕ್ತಾಯವಾಗಿದೆ.
ಯುದ್ಧ ವಿಮಾನವು ನೌಕೆಯ ಮೇಲೆ ಇಳಿಯುವ ವ್ಯವಸ್ಥೆಯನ್ನು ಪರೀಕ್ಷಿಸಬೇಕಿದೆ,’ ಎಂದರು.
ಎನ್‌ಡಿಎಗೆ ಮಹಿಳೆಯರ ಮೊದಲ ತಂಡ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು, “ನೌಕಾಪಡೆ ಸೇರಿದಂತೆ ದೇಶದ ಎಲ್ಲಾ ರಕ್ಷಣಾ ಪಡೆಗಳಲ್ಲೂ ಮಹಿಳಾ ಅಧಿಕಾರಿಗಳಿದ್ದಾರೆ. ನೌಕಾಪಡೆಯು ಮಹಿಳಾ ನಾವಿಕರ ಸೇರ್ಪಡೆ ಕಾರ್ಯಕ್ಕೆ ಚಾಲನೆ ನೀಡಿದೆ. ಈ ವರ್ಷ 3 ಸಾವಿರ ನಾವಿಕರ ಹುದ್ದೆಗೆ 10 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಮಹಿಳಾ ಅಭ್ಯರ್ಥಿಗಳಿಂದ 82 ಸಾವಿರ ಅರ್ಜಿಗಳು ಬಂದಿದ್ದವು,’ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ
ಬಾಹ್ಯಾಕಾಶ ಪ್ರವಾಸೋದ್ಯಮ ಕೈಗೆತ್ತಿಕೊಳ್ಳಲು ಇಸ್ರೋ ಅಧ್ಯಯನ: ಕೇಂದ್ರ ಸರ್ಕಾರ
ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಓವಲ್ ಆತಿಥ್ಯ
ರಣಜಿ ಟ್ರೋಫಿ ಸೆಮಿಫೈನಲ್: ಕಾಡಿದ ಸೌರಾಷ್ಟ್ರ; ಕಾಪಾಡಿದ ಅಗರ್ವಾಲ್
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್