ಗಣರಾಜ್ಯ ದಿನಕ್ಕೆ ಬೋರಿಸ್ ಜಾನ್ಸನ್ ಅತಿಥಿ
Team Udayavani, Dec 2, 2020, 10:26 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು 2021ರ ಜ. 26ರಂದು ನಡೆಯುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರೇ ನ. 27ರಂದು ನಡೆದಿದ್ದ ಮಾತುಕತೆ ವೇಳೆ ಆಹ್ವಾನ ನೀಡಿದ್ದಾರೆ. ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಜಿ 7 ರಾಷ್ಟ್ರಗಳ ಸಮ್ಮೇಳನಕ್ಕೆ ಪ್ರಧಾನಿ ಮೋದಿಯವರನ್ನು ಜಾನ್ಸನ್ ಆಹ್ವಾನಿಸಿದ್ದಾರೆ. ಕೇಂದ್ರ ಸರಕಾರದಿಂದ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಾಗಿಲ್ಲ.
ಬ್ರಿಟನ್ ಪ್ರಧಾನಿ ಜತೆಗಿನ ಫೋನ್ ಮಾತುಕತೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ನನ್ನ ಸ್ನೇಹಿತ, ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್ ಜತೆಗೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಶಕಗಳಿಗೆ ಅನ್ವಯವಾಗುವಂತೆ ಭಾರತ-ಯು.ಕೆ. ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದ್ದೇವೆ. ವ್ಯಾಪಾರ, ಬಂಡವಾಳ ಹೂಡಿಕೆ, ರಕ್ಷಣೆ, ಭದ್ರತೆ, ಹವಾಮಾನ ಬದಲಾವಣೆ, ಕೊರೊನಾ ಸೋಂಕು ತಡೆಗಟ್ಟುವ ಕ್ಷೇತ್ರದಲ್ಲಿ ಪರಸ್ಪರ ಸಹಕರಿಸಲು ಒಪ್ಪಿಕೊಂಡಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಪ್ರತಿಯಾಗಿ ಟ್ವೀಟ್ ಮಾಡಿರುವ ಬೋರಿಸ್ ಜಾನ್ಸನ್, “ನರೇಂದ್ರ ಮೋದಿಯವರೇ ನಿಮಗೆ ಧನ್ಯವಾದ. 2021ರಲ್ಲಿ ಭಾರತ ಮತ್ತು ಯು.ಕೆ. ನಡುವೆ ಅತ್ಯುತ್ತಮ ರೀತಿಯ ಸಹಭಾಗಿತ್ವ ಇರಲಿದೆ ಮತ್ತು ಅದು ಮತ್ತಷ್ಟು ವೃದ್ಧಿಸಲಿದೆ ಎಂದು ವಿಶ್ವಾಸ ಹೊಂದಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ : ಬಾಯ್ಫ್ರೆಂಡ್ ಜತೆ ಪತ್ನಿ ಪರಾರಿ: ಪತಿ ದೂರು
ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಸ್ವಾಸ್ ಮೇಲೆ ಹಲ್ಲೆ; 12 ಗಂಟೆ ಕಾಲ ತ್ರಿಪುರಾ ಬಂದ್ ಗೆ ಕರೆ
ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು
ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ