ಭಾಗವತ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾ? ಓವೈಸಿ ಪ್ರಶ್ನೆ
Team Udayavani, Dec 4, 2017, 5:57 PM IST
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರೇ, ಅವರು ಯಾರು ? ಎಂದು ಎಎನ್ಐ ನ್ಯೂಸ್ ಏಜೆನ್ಸಿ ಜತೆ ಮಾತನಾಡುತ್ತ ಆಲ್ ಇಂಡಿಯಾ ಮಜ್ಲಿದ್ ಎ ಇತ್ತೆಹದುಲ್ ಮುಸ್ಲಿಮಿನ್ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಮಾತ್ರ ನಿರ್ಮಾಣವಾಗಲಿದೆ, ಅಲ್ಲಿ ಬೇರೆ ಏನೂ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಮೋಹನ ಭಾಗವತ್ ಅವರು ಉಡುಪಿಯ ಧರ್ಮ ಸಂಸದ್ ನಲ್ಲಿ ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಮೋಹನ್ ಭಾಗವತ್ ಅವರು ಹೇಗೆ ಈ ಹೇಳಿಕೆ ನೀಡಿದರು ಎಂದು ಅಚ್ಚರಿ ವ್ಯಕ್ತಪಡಿಸಿದ ಓವೈಸಿ, ಇದೊಂದು ವಿವಾದಿತ ಪ್ರಕರಣವಾಗಿದೆ. ಕೆಲವು ಹಿಂದುಗಳ ಪ್ರಕಾರ ರಾಮನ ಜನ್ಮಭೂಮಿ ಸ್ಥಳ ಇದಾಗಿದೆ ಎಂದು ನಂಬುತ್ತಾರೆ, ಆದರೆ ಈ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದು, ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಹೇಳಲು ಮೋಹನ್ ಭಾಗವತ್ ಗೆ ಯಾವ ಅಧಿಕಾರವಿದೆ. ನಿಮ್ಮನ್ನು ನೀವೇ ಸುಪ್ರೀಂಕೋರ್ಟ್ ನ್ಯಾಯಾಧೀಶರು ಎಂದುಕೊಂಡಿದ್ದೀರಾ ಎಂದು ನೀವು(ಪತ್ರಕರ್ತ) ಅವರನ್ನು ಪ್ರಶ್ನಿಸಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್