ಕಠ್ಮಂಡು: ನಕಲಿ ನೋಟುಗಳ ಪೂರೈಕೆದಾರನ ಹತ್ಯೆ
Team Udayavani, Sep 22, 2022, 11:30 PM IST
ಕಠ್ಮಂಡು: ಭಾರತದಲ್ಲಿ ನಕಲಿ ನೋಟುಗಳ ಅತಿದೊಡ್ಡ ಪೂರೈಕೆದಾರ, ಪಾಕಿಸ್ತಾನದ ಐಎಸ್ಐ ಏಜೆಂಟ್ ಲಾಲ್ ಮೊಹಮ್ಮದ್ ಅಲಿಯಾಸ್ ಮೊಹಮ್ಮದ್ ದರ್ಜಿ(55)ನನ್ನು ನೇಪಾಳದ ಕಠ್ಮಂಡುವಿನಲ್ಲಿ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ.
ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಲಾಲ್ ಮೊಹಮ್ಮದ್ ತನ್ನ ಐಷಾರಾಮಿ ಕಾರಿನಲ್ಲಿ ಬಂದಿಳಿಯುತ್ತಿದ್ದಂತೆ ಹಿಂದಿನಿಂದ ಬಂದ ಇಬ್ಬರು ಬಂದೂಕುಧಾರಿಗಳು ಅವನ ಮೇಲೆ ಗುಂಡು ಹಾರಿಸುತ್ತಾರೆ. ಈ ವೇಳೆ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೂ ಆತನನ್ನು ಅಟ್ಟಾಡಿಸಿಕೊಂಡು ಅವನ ಹತ್ಯೆ ಮಾಡಲಾಗುತ್ತದೆ. ಇದೇ ವೇಳೆ ತಂದೆಯನ್ನು ಕಾಪಾಡಲು ಮಗಳು ಮೊದಲನೇ ಮಹಡಿಯಿಂದ ಕೆಳಕ್ಕೆ ಧುಮುಕಿ, ಬಳಿಗೆ ಬರುತ್ತಾಳೆ. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿರುತ್ತಾನೆ.
ಲಾಲ್ ಮೊಹಮ್ಮದ್ ಇತರೆ ಐಎಸ್ಐ ಏಜೆಂಟ್ಗಳಿಗೆ ಆಶ್ರಯ ನೀಡುತ್ತಿದ್ದ. ನಕಲಿ ನೋಟುಗಳನ್ನು ಪಾಕಿಸ್ತಾನದಲ್ಲಿ ತಯಾರಿಸಿ, ಅದನ್ನು ಬಾಂಗ್ಲಾದೇಶ ಮತ್ತು ನೇಪಾಳ ಮೂಲಕ ಭಾರತಕ್ಕೆ ಸಾಗಿಸುವ ದಂಧೆಯಲ್ಲಿ ಈತ ತೊಡಗಿದ್ದನು. ಅಲ್ಲದೇ ಈತನಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಡಿ-ಕಂಪನಿಯ ನಂಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?