ಸ್ಟೇಪಲ್ಡ್ ವೀಸಾ ವಿತರಣೆ: ಚೀನಾ ಕ್ರಮಕ್ಕೆ ಭಾರತ ತೀವ್ರ ಆಕ್ಷೇಪ
Team Udayavani, Jul 27, 2023, 10:16 PM IST
ನವದೆಹಲಿ: ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಸ್ಟೇಪಲ್ಡ್ ವೀಸಾಗಳನ್ನು ವಿತರಿಸಿರುವ ಹಿನ್ನೆಲೆಯಲ್ಲಿ ಚೀನಾ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಿ, “ಚೀನಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕೆಲವು ಕ್ರೀಡಾಪಟುಗಳಿಗೆ ಚೀನಾ ಸ್ಟೇಪಲ್ಡ್ ವೀಸಾ ವಿತರಿಸಿದೆ. ಈ ಕುರಿತು ಸಂಬಂಧಪಟ್ಟ ಚೀನಾ ಅಧಿಕಾರಿಗಳ ಎದುರು ಈಗಾಗಲೇ ಭಾರತ ತೀವ್ರ ಪ್ರತಿಭಟನೆ ದಾಖಲಿಸಿದೆ,” ಎಂದು ತಿಳಿಸಿದ್ದಾರೆ.
“ಭಾರತದ ಪ್ರಜೆಗಳಾಗಿರುವ ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಈ ರೀತಿ ಸ್ಟೇಪಲ್ಡ್ ವೀಸಾಗಳನ್ನು ವಿತರಿಸಲಾಗಿದೆ. ಇದನ್ನು ಒಪ್ಪಲಾಗುವುದಿಲ್ಲ. ಇಂತಹ ಕ್ರಮಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಭಾರತ ಹೊಂದಿದೆ. ಭಾರತದ ಪಾಸ್ಪೋರ್ಟ್ ಹೊಂದಿದವರಿಗೆ ವಾಸಸ್ಥಳ ಅಥವಾ ಜನಾಂಗೀಯ ಆಧಾರದಲ್ಲಿ ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ