ಬಹುಕೋಟಿ ವಂಚನೆ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ಜಾಕ್ವೆಲಿನ್ ಫರ್ನಾಂಡಿಸ್
Team Udayavani, Sep 19, 2022, 5:15 PM IST
ನವದೆಹಲಿ: ಆರೋಪಿ ಸುಕೇಶ್ ಚಂದ್ರಶೇಖರ್ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸೋಮವಾರ ಆರ್ಥಿಕ ಅಪರಾಧ ವಿಭಾಗದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದಲ್ಲಿ ಪಾತ್ರಕ್ಕಾಗಿ ನಟಿಯನ್ನು ದೆಹಲಿ ಪೊಲೀಸರು ವಿಚಾರಣೆಗೆ ಕರೆಸಿರುವುದು ಇದು ಎರಡನೇ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮಂದಿರ ಮಾರ್ಗದಲ್ಲಿರುವ ಆರ್ಥಿಕ ಅಪರಾಧ ವಿಭಾಗದ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಬುಧವಾರ, ಚಂದ್ರಶೇಖರ್ಗೆ ನಟಿಯನ್ನು ಪರಿಚಯಿಸಿದ ಪಿಂಕಿ ಇರಾನಿಯೊಂದಿಗೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಎಂಟು ಗಂಟೆಗಳ ಕಾಲ ಪ್ರಶ್ನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು