ಜಾಧವ್ಗೆ ಗಲ್ಲು: ಇಂದು ಅಂ.ರಾ ಕೋರ್ಟ್ ತೀರ್ಪು
Team Udayavani, May 18, 2017, 11:37 AM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಗುರುವಾರ ಅಪರಾಹ್ನ 3.30ಕ್ಕೆ ಹೊರಬೀಳಲಿದೆ. ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ 11 ಮಂದಿ ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ಪ್ರಕಟಿಸಲಿದೆ.
ಸೋಮವಾರವಷ್ಟೇ ಭಾರತ ಮತ್ತು ಪಾಕಿಸ್ಥಾನದ ಪರ ವಕೀಲರು ಅಂತಾರಾಷ್ಟ್ರೀಯ ಕೋರ್ಟ್ ಮುಂದೆ ತಮ್ಮ ವಾದಗಳನ್ನು ಮಂಡಿಸಿದ್ದರು. ವಿಚಾರಣೆ ವೇಳೆ ಭಾರತವನ್ನು ಪ್ರತಿನಿಧಿಸಿದ ನ್ಯಾಯವಾದಿ ಹರೀಶ್ ಸಾಳ್ವೆ ಅವರು, ಕುಲಭೂಷಣ್ಗೆ ನೀಡಿರುವ ಶಿಕ್ಷೆಯನ್ನು ಕೂಡಲೇ ರದ್ದು ಮಾಡುವಂತೆ ಮತ್ತು ಪಾಕಿಸ್ಥಾನದ ಕ್ರಮವನ್ನು ಅಕ್ರಮ ಎಂದು ಘೋಷಿಸುವಂತೆ ಮನವಿ ಮಾಡಿದ್ದರು.
ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ಥಾನ ನಡುವಣ ಶಾಂತಿ ಮಾತುಕತೆಗೆ ಭಾರತ ಸಹಕರಿಸುತ್ತಿಲ್ಲ. ಪಾಕ್ ಮಾತುಕತೆಗೆ ಸಿದ್ಧವಿದೆ. ಆದರೆ ಭಾರತ ಹಳಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅಮೆರಿಕದಲ್ಲಿನ ಪಾಕ್ ರಾಯಭಾರಿ ಐಜಾಜ್ ಅಹಮದ್ ಚೌಧರಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ