ಜೈಪುರ ವಿಶ್ವ ಪಾರಂಪರಿಕ ತಾಣ
ಯುನೆಸ್ಕೋ ವಿಶ್ವಪಾರಂಪರಿಕ ಸಮಿತಿಯಿಂದ ಘೋಷಣೆ
Team Udayavani, Jul 7, 2019, 5:00 AM IST
ನವದೆಹಲಿ: ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ರಾಜಸ್ಥಾನದ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಾನ ದೊರಕಿದೆ. ಅಜರ್‌ಬೈಜಾನ್‌ನ ರಾಜಧಾನಿ ‘ಬಾಕು’ವಿನಲ್ಲಿ ಜೂ. 30ರಿಂದ ಆರಂಭಗೊಂಡಿರುವ ಯುನೆಸ್ಕೋ ವಿಶ್ವಪಾರಂಪರಿಕ ಸಮಿತಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಶನಿವಾರ ಮಧ್ಯಾಹ್ನ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾಪನೆಗೆ, ಚೀನಾ, ಬ್ರೆಜಿಲ್, ಆಸ್ಟ್ರೇಲಿಯಾ, ಕುವೈತ್, ಅಜರ್‌ಬೈಜಾನ್ ಸೇರಿ 20 ದೇಶಗಳು ಬೆಂಬಲಿಸಿದ್ದವು. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ನಗರಗಳ ಲೆಕ್ಕದಲ್ಲಿ ಹೇಳುವುದಾದರೆ, ಈ ಸಾಧನೆ ಮಾಡಿದ 2ನೇ ನಗರವೆಂಬ ಹೆಗ್ಗಳಿಕೆಗೆ ಜೈಪುರ ಪಾತ್ರವಾಗಿದೆ. 2017ರಲ್ಲಿ ಅಹ್ಮದಾಬಾದ್‌ಗೆ ಈ ಗೌರವ ಸಂದಿತ್ತು. ಜೈಪುರ ಈ ಗೌರವ ಪಡೆದ ಭಾರತದ 38ನೇ ಸ್ಥಳ.
ಈ ಗೌರವ ಐತಿಹಾಸಿಕ ನಗರಿಯ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದ್ದು, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ