ಮೋದಿ ರ‍್ಯಾಲಿ ಮೇಲೆ ಜೈಶ್‌ ಉಗ್ರರ ದಾಳಿ ಸಾಧ್ಯತೆ

Team Udayavani, Dec 20, 2019, 11:33 PM IST

ಹೊಸದಿಲ್ಲಿ: ಪಾಕಿಸ್ಥಾನದ ಉಗ್ರ ಸಂಘಟನೆಗಳು ಭಾನುವಾರ ಪ್ರಧಾನಿ ಮೋದಿ ಭಾಗವಹಿಸಲಿರುವ ಸಾರ್ವಜನಿಕ ಕಾರ್ಯಕ್ರಮವನ್ನು ಗುರಿಯಾಗಿರಿಸಿ ದಾಳಿ ನಡೆಸಬಹುದು ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. 2020ರ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಭಾನುವಾರ ಚಾಲನೆ ನೀಡಲಿದ್ದಾರೆ.

ಹೊಸದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ಬೃಹತ್‌ ರ‍್ಯಾಲಿ ನಡೆಸಲಿದ್ದಾರೆ. ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ಮೋದಿ ಕಾರ್ಯಕ್ರಮ ಗುರಿಯಾಗಿರಿ ಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ. ಆ ಕುಕೃತ್ಯ ನಡೆಸುವ ಉಗ್ರರು ಈಗಾಗಲೇ ಭಾರತ ಪ್ರವೇಶ ಮಾಡಿರಬಹುದು ಎಂದು ಹೇಳಲಾಗಿದೆ. ಇತ್ತೀಚೆಗಿನ ಅಯೋಧ್ಯೆ ತೀರ್ಪು, ಪೌರತ್ವ ಕಾಯ್ದೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನ ರದ್ದು ಮುಂತಾದ ಬೆಳವಣಿಗೆಗಳಿಂದ ಕ್ರುದ್ಧಗೊಂಡಿರುವ ಉಗ್ರ ಸಂಘಟನೆಗಳು ಮೋದಿಯವರನ್ನು ಗುರಿ ಮಾಡಿ ದಾಳಿ ನಡೆಸುವ ಸಾಧ್ಯತೆಗಳು ಅಧಿಕವಾಗಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ