ಅನಂತ್ ನಾಗ್; ತೀವ್ರ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ, ಓರ್ವ ಉಗ್ರ ಬಲಿ

Team Udayavani, Jun 17, 2019, 2:44 PM IST

Representative Image

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಾಡೂರಾ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಸಾವಿಗೀಡಾಗಿರುವುದಾಗಿ ಎಎನ್ ಐ ವರದಿ ತಿಳಿಸಿದೆ.

ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.

ಈ ಪ್ರದೇಶದಲ್ಲಿ ಇನ್ನೂ ಮೂವರು ಉಗ್ರರು ಅಡಗಿದ್ದು, ಎನ್ ಕೌಂಟರ್ ಮುಂದುವರಿದಿದೆ. ಸುತ್ತ ಮುತ್ತಲಿನ ಪ್ರದೇಶವನ್ನು ಸುತ್ತುವರಿದಿದ್ದು, ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ