ಜಮ್ಮು-ಕಾಶ್ಮೀರ; ಭದ್ರತಾ ಪಡೆಯ ಎನ್ ಕೌಂಟರ್ ಗೆ 3 ಉಗ್ರರು ಫಿನಿಶ್
Team Udayavani, Jan 23, 2019, 12:52 PM IST
ಜಮ್ಮು-ಕಾಶ್ಮೀರ: ಮೂವರು ಉಗ್ರರನ್ನು ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಘಟನೆ ಬುಧವಾರ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನೆರ್ ಪ್ರದೇಶದಲ್ಲಿ ನಡೆದಿದೆ ಎಂದು ಎಎನ್ ಐ ವರದಿ ಮಾಡಿದೆ.
ಇಬ್ಬರಿಂದ ಮೂವರು ಉಗ್ರರು ಅಕ್ರಮವಾಗಿ ನುಸುಳಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಡೆಸಿರುವುದಾಗಿ ವರದಿ ತಿಳಿಸಿದೆ.
ಅಲ್ಲದೇ ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.