ಅವಂತಿಪೋರಾ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ
Team Udayavani, May 6, 2020, 8:25 AM IST
ಜಮ್ಮು-ಕಾಶ್ಮೀರ: ಇಲ್ಲಿನ ಅವಂತಿಪೋರಾದಲ್ಲಿ ಭದ್ರತಾ ಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅವಂತಿಪೋರಾದ ಶರ್ಷಾಲಿ ಕ್ರಿವ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದ ಸೇನಾಪಡೆ ಮಂಗಳವಾರ ರಾತ್ರಿ ಜಂಟಿ ಕಾರ್ಯಾಚರಣೆರ ನಡೆಸಿದ್ದವು. ಬುಧವಾರ ಮುಂಜಾನೆ ವೇಳೆಗೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾಪಡೆ ಕೂಡ ಫೈರಿಂಗ್ ನಡೆಸಿದ್ದು ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಇನ್ನೂ ಕೆಲವು ಉಗ್ರರು ಅಡಗಿರುವ ಮಾಹಿತಿ ಇದ್ದು ಜಂಟಿ ಕಾರ್ಯಾಚರಣೆ ಮುಂದುವರೆದಿದೆ.
ಭಾನುವಾರ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಐವರು ಯೋಧರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರ ದಾಳಿಗೆ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿರುವ ಘಟನೆ ನಡೆದಿತ್ತು.