
Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್ ಓರ್ವ ಉಗ್ರನ ಹತ್ಯೆ
Team Udayavani, Jun 2, 2023, 11:23 AM IST

ರಜೌರಿ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.
ರಜೌರಿ ಜಿಲ್ಲೆಯ ದಸ್ಸಾಲ್ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು, ಈ ಮಾಹಿತಿ ಆಧರಿಸಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.
ಭದ್ರತಾ ಪಡೆಗಳು ಉಗ್ರರ ಅಡಗುತಾಣಗಳ ಬಳಿಗೆ ಹೋಗುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಈ ಪ್ರದೇಶದಲ್ಲಿ ಎಷ್ಟು ಉಗ್ರರು ಅಡಗಿದ್ದಾರೆ ಎಂಬ ಬಗ್ಗೆ ತಿಳಿದುಬಂದಿಲ್ಲ.ಸದ್ಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ