Tragedy: ಬಿಹಾರದ ಕೈಮೂರ್ ನಲ್ಲಿ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿ 9 ಮಂದಿ ಮೃತ್ಯು
Team Udayavani, Feb 26, 2024, 8:54 AM IST
ಕೈಮೂರ್: ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೊಹಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿಯ ಜಿಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಎರಡು ವಾಹನಗಳು ರಸ್ತೆಯ ಬದಿಗೆ ಬಂದು ಡಿಕ್ಕಿ ಹೊಡೆದು ನಿಂತಿದೆ ಇದೆ ವೇಳೆ ವೇಗವಾಗಿ ಬಂದ ಟ್ರಕ್ ಎರಡೂ ವಾಹನಗಳಿಗೂ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ಸೇರಿ ಜೀಪ್ ನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಟ್ರಕ್ ಅನ್ನು ವಶಕ್ಕೆ ಪಡೆದುಕೊಂಡಿ ತನಿಖೆ ನಡೆಸಲಾಗುವುದೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಅಲ್ಲದೆ ಮೃತರ ಕುಟುಂಬಕ್ಕೆ ನೆರವು ನೀಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Haryana: ಭಾರತೀಯ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ನಫೆ ಸಿಂಗ್ ರಾಠಿ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು