ಯೋಧ ಹುತಾತ್ಮ: ಮೂವರು ಉಗ್ರರು ಫಿನಿಶ್‌; ಪುಲ್ವಾಮಾದಲ್ಲಿ ಕರ್ಫ್ಯೂ

ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರಿಗೆ ಗಂಭೀರ ಗಾಯ

Team Udayavani, May 16, 2019, 8:59 AM IST

ಶ್ರೀನಗರ : ಜಮ್ಮು ಮತ್ತುಕಾಶ್ಮೀರದ ಪುಲ್ವಾಮಾ ದಲ್ಲಿ ಗುರುವಾರ ಬೆಳಗ್ಗೆ ಉಗ್ರರೊಂದಿಗೆ ಸೇನಾಪಡೆಗಳು ಭೀಕರ ಗುಂಡಿನ ಕಾಳಗ ನಡೆಸಿವೆ. ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.

ದಾಲಿ ಪೋರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ಪಡೆಗಳು ದಾಳಿ ನಡೆಸಿದ್ದು, ಭಾರೀ ಗುಂಡಿನಕಾಳಗ ನಡೆದಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯ ಸೇನಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಘಟನೆ ಬಳಿಕ ಪುಲ್ವಾಮಾದಲ್ಲಿ ಕರ್ಫ್ಯೂ ಹೇರಲಾಗಿದೆ.

ಫೆಬ್ರವರಿ 14 ರಂದು ಪುಲ್ವಾಮಾದಲ್ಲಿ ಭೀಕರ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಬಳಿಕ ಸೇನಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಇದುವರೆಗೆ ನಡೆಸಿರುವ ಕಾರ್ಯಾಚರಣೆಯಲ್ಲಿ 45 ಮಂದಿ ಉಗ್ರರನ್ನು ಹತ್ಯೆಗೈಯಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ