ಪುಲ್ವಾಮದಲ್ಲಿ ಇಬ್ಬರು ಉಗ್ರರು, ಓರ್ವ ಸಹಚರ ಸೇರಿ ಮೂವರನ್ನು ಎನ್ ಕೌಂಟರ್ ಮಾಡಿದ ಭದ್ರತಾಪಡೆ
Team Udayavani, Apr 25, 2020, 8:28 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರಾದಲ್ಲಿ ಇಂದು ಮುಂಜಾನೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಮತ್ತು ಅವರ ಓರ್ವ ಸಹವರ್ತಿಯನ್ನು ಎನ್ ಕೌಂಟರ್ ಮೂಲಕ ಹತ್ಯೆಗೈಯಲಾಗಿದೆ ಎಂದು ಜೀ ನ್ಯೂಸ್ ವರದಿ ಮಾಡಿದೆ.
ಭಾರತೀಯ ಸೇನೆಯ ಕುಮಾವೊನ್ ರೆಜಿಮೆಂಟ್, ಸಿಆರ್ ಪಿಎಫ್ ಬೆಟಾಲಿಯನ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಖಚಿತ ಮಾಹಿತಿ ಪಡೆದು ಉಗ್ರರು ತಂಗಿರುವ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಅವಂತಿಪೋರಾದ ಗೋರಿಪೋರಾ ಏರಿಯಾದಲ್ಲಿ ಈ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿವೆ. ಉಗ್ರರಿಗೆ ಸಹವರ್ತಿಯಾಗಿದ್ದ ಓರ್ವ ವ್ಯಕ್ತಿಯನ್ನು ಇದೇ ವೇಳೆ ಎನ್ ಕೌಂಟರ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಭಾರೀ ಮದ್ದುಗುಂಡುಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಶುಕ್ರವಾರ ಸಿಆರ್ ಪಿಎಫ್ (ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್) ಶಿಬಿರದ ಮೇಲೆ ಉಗ್ರರು ಗ್ರೆನೇಡ್ ಎಸೆದ ಘಟನೆ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದಿತ್ತು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಈ ಘಟನೆ ನಡೆದ ಮರುದಿನವೇ ಎರಡು ಉಗ್ರರನ್ನು ಎನ್ ಕೌಂಟರ್ ಮೂಲಕ ಹತ್ಯೆಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!