ಪಣಜಿ: ಹಾಸ್ಪಿಟಾಲಿಟಿ ವಲಯದಲ್ಲಿ ಉದ್ಯೋಗಾವಕಾಶಗಳು ಸೃಷ್ಠಿ:ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್


Team Udayavani, Oct 13, 2022, 5:00 PM IST

22

ಪಣಜಿ: ಮುಂದಿನ ಐದು ವರ್ಷಗಳಲ್ಲಿ ಗೋವಾದ ಪ್ರವಾಸೋದ್ಯಮದ ಹಾಸ್ಪಿಟಾಲಿಟಿ ವಲಯದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಠಿಯಾಗಲಿದೆ. ಗೋಮಾಂತಕಿಯರು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಇಲ್ಲದಿದ್ದರೆ ಹೊರಗಿನವರು ಬಂದು ಸದುಪಯೋಗ ಪಡೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಹೇಳಿದ್ದಾರೆ.

ಬೇತಿಮ್‍ನಲ್ಲಿ ಶಾಸಕ ಕೇದಾರ ನಾಯ್ಕ ರವರ ಕಾರ್ಯಾಲಯ ಉಧ್ಘಾಟಿಸಿ ಮಾತನಾಡಿದರು.

ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಗೋವಾದಲ್ಲಿ ಯಾರೂ ನಿರುದ್ಯೋಗಿಗಳಾಗಿ ಉಳಿಯುವುದಿಲ್ಲ. ಪ್ರವಾಸೋದ್ಯಮ ಸಂಬಂಧಿತ ಪದವಿಗಳ ಜೊತೆಗೆ ಕೌಶಲ್ಯಾಭಿವೃದ್ಧಿಯ ಮೂಲಕ ತನ್ನನ್ನು ತಾನು ನವೀಕರಿಸಿಕೊಳ್ಳಬೇಕು. ಇದಕ್ಕಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ, ಐಟಿಐ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ಸರ್ಕಾರವು ಕೈಗಾರಿಕೆಗಳ 35 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದರು.

ಸರ್ಕಾರವು ಹಾಸ್ಪಿಟಾಲಿಟಿ ವಲಯದಲ್ಲಿ ಮೂರರಿಂದ ಆರು ತಿಂಗಳ ತರಬೇತಿಯನ್ನು ನೀಡುವ ಮೂಲಕ ಸಂಬಂಧಪಟ್ಟವರಿಗೆ ಕೆಲಸದ ಅವಕಾಶಗಳನ್ನು ಒದಗಿಸಲು ಪ್ರಯತ್ನಿಸುತ್ತಿದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗಲು ಸಾಧ್ಯವಿಲ್ಲ. ಆದರೆ, ಕೌಶಲ್ಯಾಭಿವೃದ್ಧಿ ಶಿಕ್ಷಣದ ಮೂಲಕ ಶೇ 100ರಷ್ಟು ಉದ್ಯೋಗಗಳನ್ನು ಒದಗಿಸುವ ಅಧಿಕಾರ ಸರ್ಕಾರ ಹಾಗೂ ಖಾಸಗಿ ವಲಯಕ್ಕೆ ಇದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು. ಪ್ರವಾಸೋದ್ಯಮ ವಲಯದಲ್ಲಿ, ಐಟಿ, ಎಲೆಕ್ಟ್ರಾನಿಕ್,  ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗಗಳು ಗೋವಾದಲ್ಲಿ ಲಭ್ಯವಿದೆ ಎಂದರು.

ಗೋಮಾಂತಕಿಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಸ್ಸಾಂ ಮತ್ತು ಇತರ ರಾಜ್ಯಗಳ ಯುವಕರು ಗೋವಾದಲ್ಲಿ ‘ವೈಟ್ ಕಾಲರ್ ಕೆಲಸ’ ಮಾಡುತ್ತಿದ್ದಾರೆ. ಸ್ಥಳೀಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಭಿಪ್ರಾಯಪಟ್ಟರು.

ಗೋವಾದಲ್ಲಿ ಹಿಂದೂ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಮೂಲಭೂತವಾಗಿ ರಾಜ್ಯದಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಎಂದಿಗೂ ಹೋರಾಟ ನಡೆದಿಲ್ಲ ಮತ್ತು ಯಾರೂ ಮತ್ತೆ ಹಾಗೆ ಮಾಡಲು ಪ್ರಯತ್ನಿಸಬಾರದು. ಆದರೆ, ಕೆಲ ರಾಜಕಾರಣಿಗಳು ತಮ್ಮ ಹಿತಾಸಕ್ತಿಗಾಗಿ ಜಗಳ ಸೃಷ್ಟಿಸಲು ಆಸಕ್ತಿ ತೋರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು. ಈ ಸಂದರ್ಭದಲ್ಲಿ ಶಾಸಕ ಕೇದಾರ ನಾಯ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದು, ಮಾತನಾಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.